ಬೆಳ್ತಂಗಡಿ: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿ ಖಂಡನೀಯ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೇಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಹೇಳಿದರು.
ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತಾ, ಉಗ್ರಗಾಮಿಗಳ ನಿಯಂತ್ರಣಕ್ಕೆ ಕೇಂದ್ರ ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು.ದಾಳಿಯ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಕ್ಷಮಿಸದೆ ಕಠಿಣ ಶಿಕ್ಷೆ ವಿಧಿಸಬೇಕು.
ಈ ದಾಳಿಯಲ್ಲಿ ಮೃತರಾದವರಿಗೆ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅಭಿನಂದನ್ ಹರೀಶ್ ಕುಮಾರ್ ತಿಳಿಸಿದರು.