April 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

ಬೆಳ್ತಂಗಡಿ: ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಕಿರೀಟವೆನಿಸಿದ ಶಾರದ ಮಾತೆಯ ನೆಲೆವೀಡಾದ ಜಮ್ಮು- ಕಾಶ್ಮೀರವನ್ನು ಸಂರಕ್ಷಿಸಿ ಆರ್ಟಿಕಲ್ 370 ರದ್ದುಗೊಳಿಸುವ ಮತ್ತು ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯಲು ತೆಗೆದುಕೊಂಡ ದಿಟ್ಟ ಕ್ರಮದ ಪರಿಣಾಮ ಜಮ್ಮು ಕಾಶ್ಮೀರ ಸಾಮಾನ್ಯ ಸ್ಥಿತಿಗೆ ಬಂದಿರೋದರಿಂದ ಉಗ್ರರು ಹತಾಶರಾಗಿ ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ತಮ್ಮ ಹೇಡಿತನವನ್ನು ಪ್ರದರ್ಶಿಸಿದ್ದಾರೆ ಎಂದು ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹೇಡಿತನದ ಉಗ್ರರ ದಾಳಿಗೆ ಬಲಿಯಾಗಿರುವವರ ಸಾವು ಅತ್ಯಂತ ನೋವು ತಂದಿದೆ. ಮೃತರ ಕುಟುಂಬಗಳಿಗೆ ಈ ದಾರುಣ ಘಟನೆಯ ಆಘಾತ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಮುಂದಿನ ದಿನಗಳಲ್ಲಿ ಇಂತಹ ಹತಾಶ ಉಗ್ರರ ರಣಹೇಡಿ ಕೃತ್ಯಗಳು ಮರುಕಳಿಸದಂತೆ ಕೇಂದ್ರ ಸರ್ಕಾರದಿಂದ ಉಗ್ರರಿಗೆ ದಿಟ್ಟ ಸಂದೇಶ ರವಾನೆಯಾಗಲಿ ಹಾಗೆಯೇ ಎಕ್ಸಾಮ್ ಸಂದರ್ಭದಲ್ಲಿ ಜನಿವಾರ ಕಳಚಿದ ಕೃತ್ಯ ನಡೆಸಿದವರಿಗೂ ರಾಜ್ಯ ಸರಕಾರ ದಿಟ್ಟ ಕ್ರಮ ಕೈಗೊಂಡು ಶಿಕ್ಷೆ ನೀಡಬೇಕೆಂದು ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪೂವಾಜೆ ಕುಶಾಲಪ್ಪ ಗೌಡ ಮತ್ತು ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ, ಯುವವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ತಾಜೆ ಹಾಗೂ ಕಾರ್ಯದರ್ಶಿಗಳು ಎಲ್ಲಾ ಪದಾಧಿಕಾರಿಗಳು ಮತ್ತು ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya
error: Content is protected !!