31.4 C
ಪುತ್ತೂರು, ಬೆಳ್ತಂಗಡಿ
April 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

ಮುಂಡೂರು: ಇಲ್ಲಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ವೇದಮೂರ್ತಿ ಆಲಂಬಾಡಿ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಎ.22ರಂದು ವಿಜೃಂಭಣೆಯಿಂದ ನಡೆಯಿತು.

ಪೂರ್ವಾಹ್ನ 6ರಿಂದ ಸಾಮೂಹಿಕ ಪ್ರಾರ್ಥನೆ, ಪುಣ್ಯಹವಾಚನ, ಚಂಡಿಕಾ ಹೋಮ ಪ್ರಾರಂಭ, ಗಣಪತಿ ಹೋಮ, ಕಲಶಾಭಿಷೇಕ, ಮುಂಡೂರು ರಾಮದಾಸ ಭಟ್ ನೇತೃತ್ವದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಹಾಪೂಜೆ, ದೇವರ ಬಲಿ ಉತ್ಸವ, ಮಧ್ಯಾಹ್ನ ಗಂಟೆ ದೇವರ ಸನ್ನಿಧಿಯಲ್ಲಿ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಶ್ರೀ ಶಾರದಾಂಬ ಭಜನಾ ಮಂಡಳಿ ಮುಂಡೂರು ಹಾಗೂ ಶ್ರೀ ನಾಗಾಂಬಿಕ ಭಜನಾ ಮಂಡಳಿ, ಶ್ರೀಕ್ಷೇತ್ರ ಮಂಗಳಗಿರಿ, ಮುಂಡೂರು ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ನಡಯಿತು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ಯಕ್ಷಗಾನ ಬಯಲಾಟ ಸೇವಾ ಸಮಿತಿ ಮುಂಡೂರು ಇದರ ಆಶ್ರಯದಲ್ಲಿ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಸುಂಕದಕಟ್ಟೆ ಬಜಪೆ ಇವರಿಂದ ಗುಂಡದ ಗುರ್ಕಾರೆ (ಕಾಲಮಿತಿ) ಎಂಬ ತುಳು ಯಕ್ಷಗಾನ ಕಥಾಭಾಗವನ್ನು ಆಡಿ ತೋರಿಸಿದರು. ನೂರಾರು ಭಕ್ತರ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ಬೆಸ್ಟ್ ಪೌಂಢೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಆಗಮಿಸಿ ದೇವರ ಪ್ರಸಾದ ಸ್ವೀಕರಿಸಿದರು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮಾನಂದ ಸಾಲಿಯಾನ್, ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಚಾಮರಾಜ ಸೇಮಿತ, ಕಾರ್ಯದರ್ಶಿ ಅಶೋಕ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೀವ ಸಾಲಿಯಾನ್, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಆಚಾರ್ಯ, ಕೋಶಾಧಿಕಾರಿ ಕೇಶವ ಕುಲಾಲ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ|ಎಂ.ಎಂ ದಯಾಕರ್ ಭಟ್,ವ್ಯವಸ್ಥಾಪನಾ ಸಮಿತಿ ಸದಸ್ಯರಾದಹರಿಶ್ಚಂದ್ರ ಹೆಗ್ಡೆ ಹುಣಿಂಜೆ, ನೀತಾ ಮಹೇಶ್ ಕುಮಾರ್ ನಡಕ್ಕರ, ಪುಷ್ಪಾ ಶೆಟ್ಟಿ ಕಲ್ಲಂಡ, ಅಶೋಕ್ ಕುಮಾರ್ ಕೊಡಕ್ಕಾಲು, ರುಕ್ಮಯ ನಾಯ್ಕ ಕಾಡಂಗೆ, ಪುರಂದರ ಆಚಾರ್ಯ ಮುಂಗುಡಮೆ, ರಮೇಶ್ ದೇವಾಡಿಗ ದುರ್ಗಾನಗರಹಾಗೂ ಪದಾಧಿಕಾರಿಗಳು, ಸರ್ವಸದಸ್ಯರು, ಗೌರವ ಸಲಹೆಗಾರರು ಮತ್ತು ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಜೀರ್ಣೊದ್ದಾರ ಸಮಿತಿ ಹಾಗೂ ಗ್ರಾಮದ ಸಮಸ್ತ ಭಕ್ತ ವೃಂದ, ಶ್ರೀದುರ್ಗಾ ಯುವ ಸಂಚಲನ ಸಮಿತಿ ಮತ್ತು ಮಹಿಳಾ ಸಂಚಲನ ಸಮಿತಿ ಶ್ರೀ ಶಾರದಾಂಬ ಭಜನಾ ಮಂಡಳಿ, ಮುಂಡೂರು, ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಮುಂಡೂರಿನ ಸದಸ್ಯರು ಭಾಗವಹಿಸಿದ್ದರು.

Related posts

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya
error: Content is protected !!