22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

ಉಜಿರೆ: ಜಮ್ಮು- ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿ ಹಿಂದೂಗಳ ಮೇಲೆ ಭಯೋತ್ಪಾದಕರು ನಡೆಸಿದ ಹೇಯ ಕೃತ್ಯವನ್ನು ಖಂಡಿಸಿ ಮತ್ತು ದಾಳಿ ಮಾಡಿದ ಭಯೋತ್ಪಾದಕ ಸಂಘಟನೆಯನ್ನು ಬೇರು ಸಹಿತ ಕಿತ್ತು ಹಾಕಲು ಭಾರತೀಯ ಸೇನೆಗೆ ಸಂಪೂರ್ಣ ಅಧಿಕಾರ ನೀಡಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಎ.24ರಂದು ರಾತ್ರಿ ಉಜಿರೆ ಸರ್ಕಲ್ ನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ಶ್ರದ್ಧಾಂಜಲಿ ಸಭೆ ನಡೆಯಿತು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿ, ಪಾಕಿಸ್ತಾನ ಎಂಬ ಪಾಪಿ ದೇಶ ಭಯೋತ್ಪಾದಕರನ್ನು ಹುಟ್ಟು ಹಾಕಿಸಿ ಅದೆಷ್ಟೋ ಸನಾತನ ಹಿಂದೂಗಳ ರಕ್ತವನ್ನು ಹರಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ನಾವು ನಿಮ್ಮ ಕೈಯಲ್ಲಿ ಕೈಯನ್ನು ಬಲ ಪಡಿಸುತ್ತೇವೆ, ಭಾರತ ದೇಶದ ಸೈನಿಕರಿಗೆ ಅವಕಾಶವನ್ನು ಕೊಡಿ ಒಂದೇ ಒಂದು ಗಂಟೆಯಲ್ಲಿ ಪಾಕಿಸ್ತಾನವನ್ನು ಭೂಪಟದಲ್ಲಿ ಇಲ್ಲದಂತೆ ಮಾಡಿ ಬಿಡುತ್ತಾರೆ ಎಂದು ಕಾಶ್ಮೀರದ ಕೃತ್ಯವನ್ನು ಖಂಡಿಸಿದರು.

ನಿವೃತ್ತ ಯೋಧ ಕರುಣಾಕರ ಶೆಟ್ಟಿ ಗೋಳಿತೊಟ್ಟು ಮಾತನಾಡಿ, ಭಯೋತ್ಪಾದನೆಗೆ ಬೆಂಬಲ ನೀಡುವಂತಹ ದೇಶವನ್ನೇ ನಿರ್ನಾಮ ಮಾಡಿದರೆ ಮಾತ್ರ ಭಯೋತ್ಪಾದನೇ ಅಂತ್ಯ ಕಾಣಲು ಸಾಧ್ಯ. ಈ ಸಂದರ್ಭದಲ್ಲಿ ಎಲ್ಲಾ ರಾಜಕೀಯ, ಧರ್ಮ ಬದಿಗಿಟ್ಟು ಕೇಂದ್ರ ಸರ್ಕಾರದ ಬಲಿಷ್ಠ ನಾಯಕ ನರೇಂದ್ರ ಮೋದಿಯವರಿಗೆ ಭಯೋತ್ಪಾದನೆಯನ್ನು ಹಾಗೂ ಸಂಪೂರ್ಣ ಪಾಕಿಸ್ತಾನವನ್ನೇ ನಿರ್ನಾಮ ಮಾಡಲು ಎಲ್ಲಾ ಪಕ್ಷಗಳು, ನಾಯಕರುಗಳು ಬೆಂಬಲ ನೀಡಬೇಕು. ಪ್ರಧಾನಿ ನರೇಂದ್ರ ಮೋದಿಯವರು ತಕ್ಕ ರೀತಿಯ ಪ್ರತಿಕಾರವನ್ನು ನೀಡುತ್ತಾರೆ ಎಂಬ ನಂಬಿಕೆ ನಮಗೆಲ್ಲರಿಗೂ ಇದೆ ಎಂದು ಸಾವಿಗೀಡಾದವರಿಗೆ ಸಂತಾಪ ಸೂಚಿಸಿದರು.

ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ದಾಳಿಯಿಂದಾಗಿ ಅಗಲಿದವರ ಆತ್ಮಕ್ಕೆ ಶಾಂತಿ ದೊರೆಯಲೆಂದು ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷ ಅನೀಲ್ ಕುಮಾರ್ ಅಂತರ, ಸಂಚಾಲಕ ಮನೋಜ್ ಕುಂಜರ್ಪ ಹಾಗೂ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ ಆರಂಭ182 ಮಂದಿ ಶಿಬಿರಾರ್ಥಿಗಳು ಭಾಗಿ

Suddi Udaya

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ: ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ,

Suddi Udaya

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya
error: Content is protected !!