ಬೆಳ್ತಂಗಡಿ: ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ಹೃದಯ ವಿದ್ರಾವಕ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಚೈತನ್ಯದ ಮೇಲಿನ ದಾಳಿಯಾಗಿದೆ. ಹಾಗಾಗಿ ಇದು ಸಂಯಮದ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆಯನ್ನು ನೀಡುವ ಸಮಯ. ನರೇಂದ್ರ ಮೋದಿ ಜೀ, ಅಮಿತ್ ಶಾ ಜೀ ಮತ್ತು ರಾಜನಾಥ್ ಸಿಂಗ್ ಜೀ ತಾವುಗಳು ಈ ಹೇಡಿತನದ ಹಿಂದಿರುವವರ ವಿರುದ್ಧ ದೃಢ ನಿರ್ಧಾರ ಕೈಗೊಂಡು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವಂತೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು. ಆಗ್ರಹಿಸಿದ್ದಾರೆ.