April 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

ದ್ವಿತೀಯ ಪಿಯುಸಿ ಹಾಗೂ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಫಲಿತಾಂಶಗಳ ಮೂಲಕ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಮಾಜದ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ ವ್ಯವಸ್ಥೆಯಡಿಯಲ್ಲಿ ಹೈಟೆಕ್ ಸೌಲಭ್ಯದೊಂದಿಗೆ ಪಿ. ಯು. ಶಿಕ್ಷಣ ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ದೊರಕಿಸಿಕೊಡಬೇಕೆಂಬ ಮಹಾದಾಸೆಯಿಂದ ‘ಕ್ರಿಯೇಟಿವ್ ಹೊಂಗಿರಣ’ ಯೋಜನೆಯನ್ನು ರೂಪಿಸುತ್ತಿದೆ.


ಈ ಯೋಜನೆಯಡಿಯಲ್ಲಿ 100 ಅರ್ಹ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಅಥವಾ ಪ್ರೋತ್ಸಾಹ ಧನದೊಂದಿಗೆ ಪಿ. ಯು ಶಿಕ್ಷಣ ಪಡೆಯುವ ಅವಕಾಶವಿರುತ್ತದೆ. ಈ ಯೋಜನೆಗೆ ವಿಜ್ಞಾನ ವಿಭಾಗ ಸೇರಲಿಚ್ಛಿಸುವ ಯಾವುದೇ ವಿದ್ಯಾರ್ಥಿ www.creativeedu.in ಮುಖಾಂತರ ಅರ್ಜಿ ಸಲ್ಲಿಸಬಹುದು.


ವಿದ್ಯಾರ್ಥಿಗಳ ಸಾಧಿಸುವ ಛಲಕ್ಕೆ ಬೆನ್ನೆಲುಬಾಗಿ ನಿಂತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಸಾಧನೆ ಮಾಡುವ ಹಂಬಲ ಇರುವ ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದೆ. ಪೋಷಕರ ಹಾಗೂ ಪಾಲಕರ ಭರವಸೆಯನ್ನು ಈಡೇರಿಸುವಲ್ಲಿ ನಿರಂತರ ಶ್ರಮಿಸುತ್ತಿರುವ ವಿದ್ಯಾ ಸಂಸ್ಥೆಯಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 919606474298

Related posts

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya
error: Content is protected !!