27.1 C
ಪುತ್ತೂರು, ಬೆಳ್ತಂಗಡಿ
April 27, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.30: ವಾಣಿ ಕಾಲೇಜು ಪ್ರಾಂಶುಪಾಲ ಡಿ. ಯದುಪತಿ ಗೌಡ ಸೇವಾ ನಿವೃತ್ತಿ

ಬೆಳ್ತಂಗಡಿಯ ಹಳೆಕೋಟೆಯಲ್ಲಿರುವ ವಾಣಿ ಪದವಿಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಡಿ. ಯದುಪತಿ ಗೌಡ ಅವರು ಏಪ್ರಿಲ್ 30 ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ.

2004ರಲ್ಲಿ ಪ್ರಾರಂಭಗೊಂಡ ವಾಣಿ ಪದವಿಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿ 21 ವರ್ಷಗಳಲ್ಲಿ ಕಾಲೇಜನ್ನು ಶೈಕ್ಷಣಿಕವಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಲ್ಲಿ ಇವರ ಶ್ರಮ ಮಹತ್ತರವಾದದ್ದು. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ರೇಂಜರ್ಸ್, ರೆಡ್ ಕ್ರಾಸ್ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರ, ಪ್ರಾಯೋಗಿಕ ಪರೀಕ್ಷಾ ಕೇಂದ್ರ, ಸಿ.ಇ.ಟಿ ಪರೀಕ್ಷಾ ಕೇಂದ್ರ, ಮೊರಾರ್ಜಿ ದೇಸಾಯಿ ಪರೀಕ್ಷಾ ಕೇಂದ್ರವಾಗಿ ಪ್ರಾರಂಭಿಸಲು ಇವರ ಶ್ರಮ ಮಹತ್ವದ್ದು. ದಕ್ಷಿಣಕನ್ನಡ ಜಿಲ್ಲಾ ಪ್ರಾಂಶುಪಾಲ ಸಂಘದ ತಾಲೂಕು ಪ್ರತಿನಿಧಿಯಾಗಿ ಜಿಲ್ಲಾ ಸಂಘದ ಉಪಾಧ್ಯಕ್ಷರಾಗಿ, ಪರೀಕ್ಷಾ ಕಮಿಟಿಯ ಸದಸ್ಯರಾಗಿ ಪದವಿಪೂರ್ವ ಕಾಲೇಜಿನ ಉದ್ಯೋಗಿಗಳ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸಿದ ಶ್ರೀಯುತರು ಬೆಳ್ತಂಗಡಿ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ದಕ್ಷಿಣಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ, ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಗಡಿನಾಡ ಕನ್ನಡ ಸೇವಾರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. 1990 ರಿಂದ ಎಂ. ಜಿ. ಎಂ ಕಾಲೇಜು ಉಡುಪಿಯಲ್ಲಿ ಸೇವೆಯನ್ನು ಆರಂಭಿಸಿ 1992 ರಿಂದ 2004 ಮೇ ತಿಂಗಳವರೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿ, ಜೂನ್ 2004ರಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿ ನಿಯುಕ್ತಿಗೊಂಡು, ಶೈಕ್ಷಣಿಕ ಕ್ಷೇತ್ರದಲ್ಲಿ 35 ವರ್ಷಗಳ ಸಾರ್ಥಕ ಸೇವೆಯನ್ನು ಸಲ್ಲಿಸಿ ಸೇವಾ ನಿವೃತ್ತಿಯನ್ನು ಹೊಂದಿರುತ್ತಾರೆ.

Related posts

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!