April 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.30: ವಾಣಿ ಕಾಲೇಜು ಪ್ರಾಂಶುಪಾಲ ಡಿ. ಯದುಪತಿ ಗೌಡ ಸೇವಾ ನಿವೃತ್ತಿ

ಬೆಳ್ತಂಗಡಿಯ ಹಳೆಕೋಟೆಯಲ್ಲಿರುವ ವಾಣಿ ಪದವಿಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಡಿ. ಯದುಪತಿ ಗೌಡ ಅವರು ಏಪ್ರಿಲ್ 30 ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ.

2004ರಲ್ಲಿ ಪ್ರಾರಂಭಗೊಂಡ ವಾಣಿ ಪದವಿಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿ 21 ವರ್ಷಗಳಲ್ಲಿ ಕಾಲೇಜನ್ನು ಶೈಕ್ಷಣಿಕವಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಲ್ಲಿ ಇವರ ಶ್ರಮ ಮಹತ್ತರವಾದದ್ದು. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ರೇಂಜರ್ಸ್, ರೆಡ್ ಕ್ರಾಸ್ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರ, ಪ್ರಾಯೋಗಿಕ ಪರೀಕ್ಷಾ ಕೇಂದ್ರ, ಸಿ.ಇ.ಟಿ ಪರೀಕ್ಷಾ ಕೇಂದ್ರ, ಮೊರಾರ್ಜಿ ದೇಸಾಯಿ ಪರೀಕ್ಷಾ ಕೇಂದ್ರವಾಗಿ ಪ್ರಾರಂಭಿಸಲು ಇವರ ಶ್ರಮ ಮಹತ್ವದ್ದು. ದಕ್ಷಿಣಕನ್ನಡ ಜಿಲ್ಲಾ ಪ್ರಾಂಶುಪಾಲ ಸಂಘದ ತಾಲೂಕು ಪ್ರತಿನಿಧಿಯಾಗಿ ಜಿಲ್ಲಾ ಸಂಘದ ಉಪಾಧ್ಯಕ್ಷರಾಗಿ, ಪರೀಕ್ಷಾ ಕಮಿಟಿಯ ಸದಸ್ಯರಾಗಿ ಪದವಿಪೂರ್ವ ಕಾಲೇಜಿನ ಉದ್ಯೋಗಿಗಳ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸಿದ ಶ್ರೀಯುತರು ಬೆಳ್ತಂಗಡಿ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ದಕ್ಷಿಣಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ, ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಗಡಿನಾಡ ಕನ್ನಡ ಸೇವಾರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. 1990 ರಿಂದ ಎಂ. ಜಿ. ಎಂ ಕಾಲೇಜು ಉಡುಪಿಯಲ್ಲಿ ಸೇವೆಯನ್ನು ಆರಂಭಿಸಿ 1992 ರಿಂದ 2004 ಮೇ ತಿಂಗಳವರೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿ, ಜೂನ್ 2004ರಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿ ನಿಯುಕ್ತಿಗೊಂಡು, ಶೈಕ್ಷಣಿಕ ಕ್ಷೇತ್ರದಲ್ಲಿ 35 ವರ್ಷಗಳ ಸಾರ್ಥಕ ಸೇವೆಯನ್ನು ಸಲ್ಲಿಸಿ ಸೇವಾ ನಿವೃತ್ತಿಯನ್ನು ಹೊಂದಿರುತ್ತಾರೆ.

Related posts

ಕೊಕ್ಕಡ: ಕೊಡಿಂಗೇರಿ ಸೇತುವೆ ಸಹಿತ ಕಿಂಡಿ ಅಣೆಕಟ್ಟುವಿನ ಉದ್ಘಾಟನೆ

Suddi Udaya

ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚೆ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!