April 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮರುಮೌಲ್ಯಮಾಪನ ಫಲಿತಾಂಶ: ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜು ತಾಲೂಕಿನಲ್ಲಿ ಪ್ರಥಮ

ಪುತ್ತೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಮಾರ್ಚ್ ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಮರುಮೌಲ್ಯಮಾಪನದ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ವಾಣಿಜ್ಯ ವಿಭಾಗದ ಅನುಶ್ರೀ 597 ಅಂಕಗಳೊಂದಿಗೆ ರಾಜ್ಯಕ್ಕೆ 3 ನೇ ರ್‍ಯಾಂಕ್ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಅನಘ ಡಿ. ಶೆಟ್ಟಿ 594 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ರ್‍ಯಾಂಕ್ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

ವಾಣಿಜ್ಯ ವಿಭಾಗದಲ್ಲಿ ಅಪರ್ಣ ಅಡಿಗ ಎ. (ಕಾಸರಗೋಡು ಜಿಲ್ಲೆಯ ಪೆರ್ಲದ ಗೋಪಾಲಕೃಷ್ಣ ಅಡಿಗ ಹಾಗೂ ಆಶಾ ಅಡಿಗ ದಂಪತಿಗಳ ಪುತ್ರಿ) 593 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರಾಂಕ್ ಗಳಿಸಿರುತ್ತಾರೆ.

ಇತ್ತೀಚೆಗೆ ಪ್ರಕಟಗೊಂಡ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಪಿ. ಯುಕ್ತಶ್ರೀ 593 ಅಂಕಗಳೊಂದಿಗೆ ರಾಜ್ಯಕ್ಕೆ 5ನೇ ರ್‍ಯಾಂಕ್ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದರು. ಈ ಮೂಲಕ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪುತ್ತೂರು ತಾಲೂಕಿನಲ್ಲಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಎಲ್ಲಾ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದ ಸಾಧನೆ ಮಾಡಿದ್ದಾರೆ.

ಕಾಲೇಜಿನ 349 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 392 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ ಹಾಗೂ 185 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 100 ಕ್ಕೆ 100 ಅಂಕಗಳನ್ನು ಗಳಿಸಿರುತ್ತಾರೆ. ಇದರೊಂದಿಗೆ ಪುತ್ತೂರಿನಲ್ಲಿ ರಾಜ್ಯಮಟ್ಟದಲ್ಲಿ ಅತ್ಯಧಿಕ ರಾಂಕ್ ಗಳನ್ನು ಗಳಿಸಿದ ಏಕೈಕ ವಿದ್ಯಾಸಂಸ್ಥೆ ಎನ್ನುವ ಹೆಗ್ಗಳಿಕೆಗೆ ವಿವೇಕಾನಂದ ಪದವಿಪೂರ್ವ ಕಾಲೇಜು ಪಾತ್ರವಾಗಿದೆ.

ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ- ಉಪನ್ಯಾಸಕೇತರ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Related posts

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ಬೆಳಾಲು: ಮಾಚಾರು ನಿವಾಸಿ ಸುಂದರ ಮಡಿವಾಳ ನಿಧನ

Suddi Udaya

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya
error: Content is protected !!