April 27, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.30: ವಾಣಿ ಕಾಲೇಜು ಪ್ರಾಂಶುಪಾಲ ಡಿ. ಯದುಪತಿ ಗೌಡ ಸೇವಾ ನಿವೃತ್ತಿ

ಬೆಳ್ತಂಗಡಿಯ ಹಳೆಕೋಟೆಯಲ್ಲಿರುವ ವಾಣಿ ಪದವಿಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಡಿ. ಯದುಪತಿ ಗೌಡ ಅವರು ಏಪ್ರಿಲ್ 30 ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ.

2004ರಲ್ಲಿ ಪ್ರಾರಂಭಗೊಂಡ ವಾಣಿ ಪದವಿಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿ 21 ವರ್ಷಗಳಲ್ಲಿ ಕಾಲೇಜನ್ನು ಶೈಕ್ಷಣಿಕವಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಲ್ಲಿ ಇವರ ಶ್ರಮ ಮಹತ್ತರವಾದದ್ದು. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ರೇಂಜರ್ಸ್, ರೆಡ್ ಕ್ರಾಸ್ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರ, ಪ್ರಾಯೋಗಿಕ ಪರೀಕ್ಷಾ ಕೇಂದ್ರ, ಸಿ.ಇ.ಟಿ ಪರೀಕ್ಷಾ ಕೇಂದ್ರ, ಮೊರಾರ್ಜಿ ದೇಸಾಯಿ ಪರೀಕ್ಷಾ ಕೇಂದ್ರವಾಗಿ ಪ್ರಾರಂಭಿಸಲು ಇವರ ಶ್ರಮ ಮಹತ್ವದ್ದು. ದಕ್ಷಿಣಕನ್ನಡ ಜಿಲ್ಲಾ ಪ್ರಾಂಶುಪಾಲ ಸಂಘದ ತಾಲೂಕು ಪ್ರತಿನಿಧಿಯಾಗಿ ಜಿಲ್ಲಾ ಸಂಘದ ಉಪಾಧ್ಯಕ್ಷರಾಗಿ, ಪರೀಕ್ಷಾ ಕಮಿಟಿಯ ಸದಸ್ಯರಾಗಿ ಪದವಿಪೂರ್ವ ಕಾಲೇಜಿನ ಉದ್ಯೋಗಿಗಳ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸಿದ ಶ್ರೀಯುತರು ಬೆಳ್ತಂಗಡಿ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ದಕ್ಷಿಣಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ, ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಗಡಿನಾಡ ಕನ್ನಡ ಸೇವಾರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. 1990 ರಿಂದ ಎಂ. ಜಿ. ಎಂ ಕಾಲೇಜು ಉಡುಪಿಯಲ್ಲಿ ಸೇವೆಯನ್ನು ಆರಂಭಿಸಿ 1992 ರಿಂದ 2004 ಮೇ ತಿಂಗಳವರೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿ, ಜೂನ್ 2004ರಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿ ನಿಯುಕ್ತಿಗೊಂಡು, ಶೈಕ್ಷಣಿಕ ಕ್ಷೇತ್ರದಲ್ಲಿ 35 ವರ್ಷಗಳ ಸಾರ್ಥಕ ಸೇವೆಯನ್ನು ಸಲ್ಲಿಸಿ ಸೇವಾ ನಿವೃತ್ತಿಯನ್ನು ಹೊಂದಿರುತ್ತಾರೆ.

Related posts

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಬಜಿರೆ‌ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಮಾಡಿದ ಆರೋಪ: ಐವರ ಮೇಲೆ ಪ್ರಕರಣ: ಓವ೯ರ ಬಂಧನ

Suddi Udaya

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya
error: Content is protected !!