ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.30: ವಾಣಿ ಕಾಲೇಜು ಪ್ರಾಂಶುಪಾಲ ಡಿ. ಯದುಪತಿ ಗೌಡ ಸೇವಾ ನಿವೃತ್ತಿ

ಬೆಳ್ತಂಗಡಿಯ ಹಳೆಕೋಟೆಯಲ್ಲಿರುವ ವಾಣಿ ಪದವಿಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಡಿ. ಯದುಪತಿ ಗೌಡ ಅವರು ಏಪ್ರಿಲ್ 30 ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ.

2004ರಲ್ಲಿ ಪ್ರಾರಂಭಗೊಂಡ ವಾಣಿ ಪದವಿಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿ 21 ವರ್ಷಗಳಲ್ಲಿ ಕಾಲೇಜನ್ನು ಶೈಕ್ಷಣಿಕವಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಲ್ಲಿ ಇವರ ಶ್ರಮ ಮಹತ್ತರವಾದದ್ದು. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ರೇಂಜರ್ಸ್, ರೆಡ್ ಕ್ರಾಸ್ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರ, ಪ್ರಾಯೋಗಿಕ ಪರೀಕ್ಷಾ ಕೇಂದ್ರ, ಸಿ.ಇ.ಟಿ ಪರೀಕ್ಷಾ ಕೇಂದ್ರ, ಮೊರಾರ್ಜಿ ದೇಸಾಯಿ ಪರೀಕ್ಷಾ ಕೇಂದ್ರವಾಗಿ ಪ್ರಾರಂಭಿಸಲು ಇವರ ಶ್ರಮ ಮಹತ್ವದ್ದು. ದಕ್ಷಿಣಕನ್ನಡ ಜಿಲ್ಲಾ ಪ್ರಾಂಶುಪಾಲ ಸಂಘದ ತಾಲೂಕು ಪ್ರತಿನಿಧಿಯಾಗಿ ಜಿಲ್ಲಾ ಸಂಘದ ಉಪಾಧ್ಯಕ್ಷರಾಗಿ, ಪರೀಕ್ಷಾ ಕಮಿಟಿಯ ಸದಸ್ಯರಾಗಿ ಪದವಿಪೂರ್ವ ಕಾಲೇಜಿನ ಉದ್ಯೋಗಿಗಳ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸಿದ ಶ್ರೀಯುತರು ಬೆಳ್ತಂಗಡಿ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ದಕ್ಷಿಣಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ, ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಗಡಿನಾಡ ಕನ್ನಡ ಸೇವಾರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. 1990 ರಿಂದ ಎಂ. ಜಿ. ಎಂ ಕಾಲೇಜು ಉಡುಪಿಯಲ್ಲಿ ಸೇವೆಯನ್ನು ಆರಂಭಿಸಿ 1992 ರಿಂದ 2004 ಮೇ ತಿಂಗಳವರೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿ, ಜೂನ್ 2004ರಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿ ನಿಯುಕ್ತಿಗೊಂಡು, ಶೈಕ್ಷಣಿಕ ಕ್ಷೇತ್ರದಲ್ಲಿ 35 ವರ್ಷಗಳ ಸಾರ್ಥಕ ಸೇವೆಯನ್ನು ಸಲ್ಲಿಸಿ ಸೇವಾ ನಿವೃತ್ತಿಯನ್ನು ಹೊಂದಿರುತ್ತಾರೆ.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನೂತನ ವಿಕಾರ್ ಜೆನರಲ್‌ಗೆ ಸನ್ಮಾನ

Suddi Udaya

ಉಜಿರೆ: ಹೊಳೆಯಂತಾದ ರಾಷ್ಟ್ರೀಯ ಹೆದ್ದಾರಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಒರಿಸ್ಸಾ ರಾಜ್ಯದ ಸಹಕಾರಿ ಪ್ರತಿನಿಧಿಗಳ ಭೇಟಿ

Suddi Udaya

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya
error: Content is protected !!