April 29, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿವರದಿಶಾಲಾ ಕಾಲೇಜು

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

ಉಜಿರೆ: ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತಿದಾರ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಮೊಬೈಲ್ ಮೂಲಕ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಏ.26 ರಂದು ಉಜಿರೆಯಲ್ಲಿ ಆರೋಪಿ ಕಬ್ಬಡಿ ಆಟಗಾರ ಕಾರ್ಕಳ ನಿವಾಸಿ ಸಯ್ಯದ್(24ವ) ಎಂಬಾತನಿಗೆ ಹಿಗ್ಗ ಮುಗ್ಗ ಥಳಿಸಿದ್ದಾರೆ. ಬಳಿಕ ಆತನ ಮೊಬೈಲ್ ಪರಿಶೀಲನೆ ನಡೆಸಿದಾಗ ನೂರಾರು ಯುವತಿಯ ಹಾಗೂ ಆತನ ಅಶ್ಲೀಲ ಫೋಟೋ, ವಿಡಿಯೋಗಳು ಪತ್ತೆಯಾಗಿದೆ.

ಆರೋಪಿಯನ್ನು ಕಾರ್ಯಕರ್ತರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.ಅಪ್ರಾಪ್ತ ವಿದ್ಯಾರ್ಥಿನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ನೀಡಿದ ಮೇರೆಗೆ ಏ.26 ರಂದು ಆರೋಪಿ ಸಯ್ಯದ್(24) ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ಮಂಗಳೂರು ಫೋಕ್ಸೋ ನ್ಯಾಯಾಲಯದ ನ್ಯಾಯಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು.‌ ನ್ಯಾಯಾಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.

Related posts

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya
error: Content is protected !!