ಅಳದಂಗಡಿ :ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬನಿಗೆ. ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ವರದಿಯಾಗಿದೆ.
ಚೂರಿ ಇರಿತ ಒಳಗಾದ ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಳದಂಗಡಿ ಸಂತೆ ಮಾರುಕಟ್ಟೆಯ ಒಳಗೆ ಎ. 26 ರಂದು ರಾತ್ರಿಯ ವೇಳೆ ಕ್ಷುಲ್ಲಕ ಕಾರಣಕ್ಕೆ ಶೀನ ಹಾಗೂ ಡೆನ್ನಿಸ್ ಪಿಂಟೋ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಶೀನ ಡೆನ್ನಿಸ್ ರನ್ನು ನೆಲಕ್ಕೆ ದೂಡಿ ಹಾಕಿ ಕುತ್ತಿಗೆಗೆ ಹಾಗೂ ಎಡಗೈ ತಟ್ಟೆಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಡೆನ್ನಿಸ್ ಪಿಂಟೊ ಅವರ ಕುತ್ತಿಗೆಗೆ ಗಂಭೀರವಾಗಿ ಗಾಯಗಳಾಗಿದೆ.
ಈ ಬಗ್ಗೆ ವೇಣೂರು ಪೊಲೀಸರಿಗೆ ದೂರು ನೀಡಲಾಗಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.