ಉಜಿರೆ: ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತಿದಾರ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಮೊಬೈಲ್ ಮೂಲಕ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಏ.26 ರಂದು ಉಜಿರೆಯಲ್ಲಿ ಆರೋಪಿ ಕಬ್ಬಡಿ ಆಟಗಾರ ಕಾರ್ಕಳ ನಿವಾಸಿ ಸಯ್ಯದ್(24ವ) ಎಂಬಾತನಿಗೆ ಹಿಗ್ಗ ಮುಗ್ಗ ಥಳಿಸಿದ್ದಾರೆ. ಬಳಿಕ ಆತನ ಮೊಬೈಲ್ ಪರಿಶೀಲನೆ ನಡೆಸಿದಾಗ ನೂರಾರು ಯುವತಿಯ ಹಾಗೂ ಆತನ ಅಶ್ಲೀಲ ಫೋಟೋ, ವಿಡಿಯೋಗಳು ಪತ್ತೆಯಾಗಿದೆ.

ಆರೋಪಿಯನ್ನು ಕಾರ್ಯಕರ್ತರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.ಅಪ್ರಾಪ್ತ ವಿದ್ಯಾರ್ಥಿನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ನೀಡಿದ ಮೇರೆಗೆ ಏ.26 ರಂದು ಆರೋಪಿ ಸಯ್ಯದ್(24) ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ಮಂಗಳೂರು ಫೋಕ್ಸೋ ನ್ಯಾಯಾಲಯದ ನ್ಯಾಯಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು. ನ್ಯಾಯಾಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.