ಉಜಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವದ ಅಂಗವಾಗಿ ಮೂಡುಬಿದಿರೆ ವಿದ್ಯಾಗಿರಿಯಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಏ.22 ರಂದು ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಾಥಮಿಕ ಶಾಲಾ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಏಳನೇ ತರಗತಿಯ ಗಾನಪ್ರಿಯ ದ್ವಿತೀಯ, ಪ್ರೌಢಶಾಲಾ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಎಂಟನೇ ತರಗತಿ ಚಿರಾಗ್ ತೃತೀಯ, ಪ್ರೌಢಶಾಲಾ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಎಂಟನೇ ತರಗತಿ ಅನರ್ಘ್ಯ ತೃತೀಯ ಹಾಗೂ ಪ್ರೌಢಶಾಲಾ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಒಂಬತ್ತನೆ ತರಗತಿ ನಿಶಾ ದ್ವಿತೀಯ ಸ್ಥಾನವನ್ನು ಪಡೆದು ವಿಜೇತರಾಗಿರುತ್ತಾರೆ.
ವಿಜೇತರಾದ ವಿದ್ಯಾರ್ಥಿಗಳಿಗೆ ಏ.27 ರಂದು ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾಗಿರಿ ಮೂಡುಬಿದಿರೆಯಲ್ಲಿ ನಡೆದ ಭ| ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣ ಮಹೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಶ್ರೀ ಡಿ. ಹರ್ಷೇಂದ್ರ ಕುಮಾರ್ ಬಹುಮಾನ ವಿತರಿಸಿದರು.
ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.