ಬೆಳ್ತಂಗಡಿ : ಬಂಟರ ಕ್ರೀಡೋತ್ಸವದ ಮೂಲಕ ತುಳುನಾಡ ಸಂಸ್ಕೃತಿ, ಸಂಸ್ಕಾರವನ್ನು ಅತ್ಯಂತ ಸುಂದರವಾಗಿ ಅಭಿವ್ಯಕ್ತಗೊಂಡಿದೆ. ಇಂದಿನ ವಾತಾವರಣದಲ್ಲಿ ಜಾತಿ ಜಾತಿಗಳ ಮಧ್ಯೆ ಅಂತರ ಕಾಯ್ದುಕೊಳ್ಳದೆ ಹಿಂದೂ ಸಮಾಜ ಒಂದಾಗಿ ಬದುಕಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ತಾಲೂಕು ಯುವ ಬಂಟರ ವಿಭಾಗ, ತಾಲೂಕು ಮಹಿಳಾ ಬಂಟರ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಎ.27 ರಂದು ಗುರುವಾಯನಕೆರೆ ಶಕ್ತಿನಗರ ನವಶಕ್ತಿ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ ಪಥ ಸಂಚಲನ ಉದ್ಘಾಟಿಸಿ ಮಾತನಾಡಿದರು.

ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡಾ ಮಾತನಾಡಿ, ಬಂಟ ಸಮುದಾಯದಲ್ಲಿ ಕಳೆದ ಎಂಟು ವರ್ಷದ ಬಳಿಕ ಕ್ರೀಡಾ ಕೂಟ ಆಯೋಜಿಸುವ ಮೂಲಕ ತುಳುನಾಡಿನ ಸಂಸ್ಕೃತಿ ಬಿಂಬಿಸುವ ಕಾರ್ಯವಾಗಿದೆ ಎಂದರು.
ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಅಧ್ಯಕ್ಷ ಬಿ.ಜಯಂತ ಶೆಟ್ಟಿ ಭಂಡಾರಿಗುಡ್ಡೆ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಕಾರ್ಕಳ ಉದ್ಯಮಿ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಗುರುವಾಯನಕೆರೆ ವಿಜಯ ಕ್ರಿಡಿಟ್ -ಕೋ ಆಪರೇಟಿವ್ ಸೊಸೈಟಿ ಸ್ಥಾಪಕಾಧ್ಯಕ್ಷ ಎಸ್.ಜಯರಾಮ ಶೆಟ್ಟಿ, ಕಾವೂರು ಬಂಟರ ಸಂಘ ಅಧ್ಯಕ್ಷ ಆನಂದ ಶೆಟ್ಟಿ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಮೂಡುಬಿದ್ರೆ ಬಂಟರ ಮಹಿಳಾ ಘಟಕ ಅಧ್ಯಕ್ಷೆ ಶೋಭಾ ಎಸ್.ಹೆಗ್ಡೆ, ನಿಟ್ಟೆ ಯುನಿವರ್ಸಿಟಿ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಕರುಣಾಕರ ಶೆಟ್ಟಿ ಮುಂಡಾಡಿ, ಸಂಘದ ಮಹಿಳಾ ವಿಭಾಗ ಅಧ್ಯಕ್ಷೆ ಜಯಲಕ್ಷ್ಮೀ ಎನ್.ಸಾಮಾನಿ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ವಿಜಯ ಕೋ.ಆ.ಸೊಸೈಟಿ ಅಧ್ಯಕ್ಷ ಅಜಿತ್ ಜಿ.ಶೆಟ್ಟಿ ಯುವ ವಿಭಾಗ ಮತ್ತು ಮಹಿಳಾ ವಿಭಾಗ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ತಾಲೂಕಿನ 9 ವಲಯದಿಂದ ತುಳುನಾಡ ಆಚಾರ ವಿಚಾರ, ಸಂಸ್ಕೃತಿ, ಆರಾಧನೆ, ಅನೇಕ ವಿಚಾರಧಾರೆಗಳನ್ನು ಒಳಗೊಂಡ ಪಥ ಸಂಚಲನವು ಬಹಳ ಅದ್ದೂರಿಯಾಗಿ ಮೂಡಿಬಂತು. ಸುಮಾರು ಎರಡು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದರು. ಮಹಿಳೆ ಮತ್ತು ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಕಾರ್ಯಕಾರಿ ಸಮಿತಿ ಉಪಾಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ ಸ್ವಾಗತಿಸಿದರು. ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ ವಂದಿಸಿದರು. ಪ್ರಕಾಶ್ ಶೆಟ್ಟಿ ನೊಚ್ಚ, ರವೀಂದ್ರ ಶೆಟ್ಟಿ ಬಳಂಜ ಕಾರ್ಯಕ್ರಮ ನಿರೂಪಿಸಿದರು.