April 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೇವಾಭಾರತಿಯಿಂದ 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ನೇಲ್ಯಡ್ಕದಲ್ಲಿ ಉದ್ಘಾಟನೆ

ನೇಲ್ಯಡ್ಕ : ಸೇವಾಭಾರತಿ, ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 32ನೇ ಟೈಲರಿಂಗ್‌ ತರಬೇತಿ ಶಿಬಿರದ ಉದ್ಘಾಟನೆ ಏ 27 ರಂದು ನೇಲ್ಯಡ್ಕದಲ್ಲಿ ನಡೆಯಿತು.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಬೆಳ್ತಂಗಡಿ ಕೌಶಲ್ಯ NRLM ಮೇಲ್ವಿಚಾರಕರು ಶ್ರೀಮತಿ ವೀಣಾಶ್ರೀ ಕೆ ಕೆ ಚಾಲನೆ ನೀಡಿ, ಭಾಗವಹಿಸಿದ ಮಹಿಳೆಯರಿಗೆ ಶುಭಹಾರೈಸಿದರು. ಈ ತರಬೇತಿ ಶಿಬಿರವು ಸ್ವ-ಉದ್ಯೋಗದ ಕಡೆಗೆ ಮಹತ್ವದ ಹೆಜ್ಜೆಯಾಗಿದೆ ಎಂದರು.

ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷರಾದ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ಸಿಇಒ ಸ್ವರ್ಣಗೌರಿ ಮಾತನಾಡಿ, ಟೈಲರಿಂಗ್ ಕಲಿಕೆ ಅನೇಕ ಉದ್ಯೋಗದ ಅವಕಾಶಗಳನ್ನು ಒದಗಿಸಬಲ್ಲದು. “ದೀಪ ಜ್ಯೋತಿ ಹೇಗೆ ಬೆಳಗುತ್ತದೋ, ಹಾಗೆಯೇ ನೀವು ಈ ವಿದ್ಯೆಯನ್ನು ಉಪಯೋಗಿಸಿ ಸಮಾಜದಲ್ಲಿ ಬೆಳಗಬೇಕು” ಎಂದು ಶುಭ ಹಾರೈಸಿದರು.

ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ, ಅರಸಿನಮಕ್ಕಿ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಪ್ರತಿಮಾ, ನೇಲ್ಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ಶ್ರೀಮತಿ ವಸಂತಿ ಕೆ, ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿ ಖಜಾಂಚಿ ಶ್ರೀಮತಿ ಬಬಿತಾ, ಟೈಲರಿಂಗ್ ತರಬೇತುದಾರರು ಶ್ರೀಮತಿ ಹರಿಣಾಕ್ಷಿ ಬಿ.ಪಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇಲ್ಯಡ್ಕ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಭವಾನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 27 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದು, ಮಹಿಳಾ ಸಬಲಿಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಕೃಷಿ ಉದ್ಯೋಗ ಸಖಿ ಗೀತಾ, ಪಶು ಸಖಿ ವೇದಾವತಿ, ಸ್ಥಳೀಯ ಸಂಪನ್ಮೂಲ ವ್ಯಕ್ತಿ ಅಮಿತ ಪ್ರಾರ್ಥನೆಯನ್ನು ಮಾಡಿ, ಕಾರ್ಯಕ್ರಮದಲ್ಲಿ ಮುಖ್ಯ ಪುಸ್ತಕ ಬರಹಗಾರರು ಶ್ರೀಮತಿ ನೀತಾ ಸ್ವಾಗತಿಸಿ, ಸೇವಾಭಾರತಿಯ ಡಾಕ್ಯುಮೆಂಟೇಶನ್, ಮೋನಿಟರಿಂಗ್ ಮತ್ತು ಕೋ – ಆರ್ಡಿನೇಟರ್ ಸುಮ ನಿರೂಪಿಸಿ. ಸ್ಥಳೀಯ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಹೇಮಲತಾ ಧನ್ಯವಾದವಿತ್ತರು.

Related posts

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya
error: Content is protected !!