ಗುರುವಾಯನಕೆರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆಯನ್ನು ರಾಜ್ಯ ಭಜನಾ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ್ ರವರ ಉಪಸ್ಥಿತಿಯಲ್ಲಿ ರಚಿಸಲಾಯಿತು.
ಸಮಿತಿಯ ಅಧ್ಯಕ್ಷರಾಗಿ ಜಗದೀಶ್ ಶೆಟ್ಟಿ ಮೈರ, ಉಪಾಧ್ಯಕ್ಷರಾಗಿ ಸೇಸಪ್ಪ ಸಾಲ್ಯಾನ್, ಕಾರ್ಯದರ್ಶಿಯಾಗಿ ಮಿಥುನ್ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ, ಕೋಶಾಧಿಕಾರಿಯಾಗಿ ರಮೇಶ್ ಆನಡ್ಕ ಆಯ್ಕೆಯಾದರು.