ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೇ.7 ರಂದು ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಡಾ. ನಾಯಕ್ಸ್ ಫರ್ಟಿಲಿಟಿ ಕ್ಲಿನಿಕ್ ಮತ್ತು ಐವಿಎಫ್ ಸೆಂಟರ್ ಸಹಯೋಗದಲ್ಲಿ ನಡೆಯುವ ಈ ಶಿಬಿರದಲ್ಲಿ ಸ್ತ್ರೀರೋಗ ತಪಾಸಣೆ, ಬಂಜೆತನ ತಪಾಸಣೆ, ಮುಟ್ಟಿನ ಅಸ್ವಸ್ಥತೆಗಳು, ಮೂತ್ರನಾಳದ ಸೋಂಕು ತಪಾಸಣೆ, ಸ್ತನದ ತಪಾಸಣೆ, ಗರ್ಭಾಶಯದ ತಪಾಸಣೆ, ಮಹಿಳೆಯರ ಕ್ಯಾನ್ಸರ್ ಮುಂತಾದ ತಪಾಸಣೆಗಳನ್ನು ಉಚಿತವಾಗಿ ಮಾಡಲಾಗುವುದು.
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರುಗಳಾದ ಡಾ. ಸ್ವರ್ಣಲತಾ, ಡಾ. ಪ್ರಿಯಾಂಕ ಜಯದೇವ್, ಡಾ. ಅನ್ವಿತಾ ಶತಾನಂ ಪ್ರಸಾದ್ ರಾವ್ ಹಾಗೂ ಸಂತಾನೋತ್ಪತ್ತಿ ಔಷಧ ಕನ್ಸಲ್ಟೆಂಟ್ ಆಗಿರುವ ಡಾ. ಪ್ರಮೋದ ಲಕ್ಷ್ಮಣ್ ಈ ಶಿಬಿರದಲ್ಲಿ ಮಹಿಳೆಯರ ರೋಗ ಮತ್ತು ಬಂಜೆತನ ತಪಾಸಣೆ ನಡೆಸಲಿದ್ದಾರೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯುವ ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತ, ಸ್ಕ್ಯಾನಿಂಗ್ 50%, ಔಷಧದಲ್ಲಿ 10%, ಒಳರೋಗಿ ವಿಭಾಗದಲ್ಲಿ 10%, ರಕ್ತಪರೀಕ್ಷೆ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ದೊರೆಯಲಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.