ಬೆಳ್ತಂಗಡಿ: ತಾಲೂಕಿನ ಹೆಚ್ಚಿನ ಭಾಗಗಳಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಗಾಳಿ,ಗುಡುಗು,ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಮಂಗಳವಾರವು ತಾಲೂಕಿನ ಹಲವು ಭಾಗಗಳಲ್ಲಿ ಮಳೆಯಾಗಿತ್ತು.

ಉಜಿರೆಯ ಕಾಲೇಜು ರಸ್ತೆಯಲ್ಲಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿತ್ತು.ಮರವು ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಪರಿಣಾಮ ಬೈಕಿಗೆ ಸಂಪೂರ್ಣ ಹಾನಿಯಾಗಿದ್ದು ಬೈಕ್ ಸವಾರ ನೀರಚಿಲುಮೆಯ ಅಮಿತ್ ಎಂಬವರು ಪವಾಡ ಸದೃಶವಾಗಿ ಯಾವುದೇ ರೀತಿಯ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಮೆಸ್ಕಾಂನವರು ಮರಗಳ ಗೆಲ್ಲುಗಳನ್ನು ಅವೈಜ್ಞಾನಿಕವಾಗಿ ಕತ್ತರಿಸಿದ್ದು ಮರಗಳು ಉರುಳಲು ಕಾರಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ..
ಉಜಿರೆಯ ಮೆಸ್ಕಾಂ ಉಪ ವಿಭಾಗದಲ್ಲಿ 10ಕ್ಕಿಂತ ಅಧಿಕ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.