25 C
ಪುತ್ತೂರು, ಬೆಳ್ತಂಗಡಿ
May 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ಸರಕಾರದ ವ್ಯಾಪ್ತಿಯಲ್ಲಿ ಮೆಸ್ಕಾಂ ಇಲಾಖೆಯು ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ಹೆಚ್ಚುವರಿ 15000/- ಠೇವಣಿ ವಿಧಿಸುವ ಯೋಜನೆ ಹಾಕಿಕೊಂಡಿದ್ದು, ಈಗಾಗಲೇ ಅಂದಾಜು ಪಟ್ಟಿ ತಯಾರಿಸಿ ಕಾರ್ಯದೇಶವಾದ ಯಾವುದೇ ಪಂಪು ಸೆಟ್ಟುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿಲ್ಲ. ಆದ್ದರಿಂದ ಬೆಳ್ತಂಗಡಿ ತಾಲೂಕಿನ ಕೃಷಿಕ ಬಂಧುಗಳು ಶಾಸಕ ಹರೀಶ್ ಪೂಂಜಾ ಅವರನ್ನು ಭೇಟಿಯಾಗಿ , ತಮ್ಮ ಮನವಿಯನ್ನು ಅರ್ಪಿಸಿದರು.

ಕೃಷಿಕರು ಈಗಾಗಲೇ ಬ್ಯಾಂಕುಗಳಿಂದ ಸಾಲ ಮಾಡಿ ಅಡಿಕೆ ಹಾಗೂ ತೆಂಗು ಇನ್ನಿತರ ಕೃಷಿ ಅಭಿವೃದ್ಧಿ ಮಾಡಿದ್ದು, ಕೃಷಿ ಪಂಪು ಸೆಟ್ಟುಗಳಿಗೆ ವಿದ್ಯುತ್ ಸಂಪರ್ಕ ಸಿಗದೇ ಬಸವಳಿದಿದ್ದಾರೆ. ಈ ಮೊದಲು ಇಲಾಖೆ ನೀಡಿದ ಇಂಟಿಮೇಶನ್ ಪ್ರಕಾರ ಠೇವಣಿ ಪಾವತಿಸಿದ್ದು, ಇದೀಗ ಹೆಚ್ಚುವರಿ 15 ಸಾವಿರ ಮೊತ್ತವನ್ನು ಪಾವತಿಸಲು ಮೆಸ್ಕಾಂ ಇಲಾಖೆ ತಿಳಿಸಿರುತ್ತದೆ. ಈ ಬಗ್ಗೆ ಇಲಾಖೆ ಹಾಗೂ ಸರಕಾರದ ಮಟ್ಟದಲ್ಲಿ ಆಗ್ರಹಿಸಿ ರೈತರ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಬೇಕಾಗಿ ಶಾಸಕರಿಗೆ ತಾಲೂಕಿನ ಕೃಷಿಕರ ಪರವಾಗಿ ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕರು ತಾಲೂಕಿನ ಕೃಷಿಕರಿಗೆ ಭರವಸೆ ನೀಡಿದರು.

Related posts

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ

Suddi Udaya

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ದ ಜಾಗೃತಿ ಸಭೆ

Suddi Udaya

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya
error: Content is protected !!