ಬೆಳ್ತಂಗಡಿ: ತಾಲೂಕಿನಲ್ಲಿ ಎ.30ರಂದು ಸುರಿದ ಭಾರಿ ಗಾಳಿ ಮಳೆಗೆ ಓಡಿಲ್ನಾಳ ಗ್ರಾಮದ ಕೃಷ್ಣಪ್ಪ ಎಂಬವರ ಮನೆಗೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದ್ದು ಮೇ 1 ರಮದು ಶಾಸಕ ಹರೀಶ್ ಪೂಂಜರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವೈಯಕ್ತಿಕವಾಗಿ ಸಹಾಯ ಮಾಡಿ, ಅಧಿಕಾರಿಗಳಿಗೆ ಸರಕಾರದಿಂದ ಸೂಕ್ತ ಪರಿಹಾರ ಒದಗಿಸಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.


ಈ ಸಂದರ್ಭದಲ್ಲಿ ಪದ್ಮುಂಜ ಸಿಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಶೆಟ್ಟಿ, ಓಡಿಲ್ನಾಳ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ನಿತೇಶ್, ಪ್ರಮುಖರಾದ ಸದಾನಂದ ಮೊದಲಾದವರು ಉಪಸ್ಥಿತರಿದ್ದರು.