25 C
ಪುತ್ತೂರು, ಬೆಳ್ತಂಗಡಿ
May 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

ಕೊಕ್ಕಡ: ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಉಪ್ಪಾರಪಳಿಕೆ, ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಉಪ್ಪಾರಪಳಿಕೆಯಲ್ಲಿ ನವೀಕೃತ ಶ್ರೀ ಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮವು ಎ. 30ರಂದು ನಡೆಯಿತು.


ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀನಾಥ್ ಬಡೆಕಾಯಿಲು ವಹಿಸಿದ್ದರು.

ಮಂಗಳೂರು ನಾರಾಯಣ ಗುರು ಕಾಲೇಜು ಉಪನ್ಯಾಸಕ ಕೇಶವ ಬಂಗೇರ ಧಾರ್ಮಿಕ ಉಪನ್ಯಾಸ ನೀಡಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ಎಸ್.ಸಿ.ಡಿ.ಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ , ಸೌತಡ್ಕ ಶ್ರೀ ಮಹಾಗಣಪತಿ ಸೇವಾಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು, ಶ್ರೀ. ಧ.ಗ್ರಾ.ಯೋಜನೆ ಯೋಜನಾಧಿಕಾರಿ ಯಶೋಧರ, ಕೊಕ್ಕಡ ಉಪವಲಯ ಅರಣ್ಯಾಧಿಕಾರಿ ಶಿವಾನಂದ ಆಚಾರ್ಯ, ಕೊಕ್ಕಡ ಗ್ರಾ.ಪಂ. ಅಧ್ಯಕ್ಷೆ ಬೇಬಿ, ಉಪಸ್ಥಿತರಿದ್ದರು.

ನಂತರ ಶ್ರದ್ದಾ ಗೆಳೆಯರ ಬಳಗದಲ್ಲಿ 25 ವರ್ಷಗಳಲ್ಲಿ ಸೇವೆ ಸಲ್ಲಿಸಿದ ಅಧ್ಯಕ್ಷರಿಗೆ ಹಾಗೂ ಭಜನಾ ಮಂದಿರದ ಮೈದಾನದ ಕೆಲಸ ಹಿಚಾಚಿ ಮೂಲಕ ಮಾಡಿಕೊಟ್ಟ ಅಶ್ವತ್ ಬಾಂತಿಮಾರು ರವರಿಗೆ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಗೌರವಾಧ್ಯಕ್ಷ ಯೋಗೀಶ್ ಆಲಂಬಿಲ, ಶ್ರೀ ಕೃಷ್ಣ ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಬಳಕ್ಕ, ಕಾರ್ಯದರ್ಶಿ ಶಿವಾನಂದ ಸಂಕೇಶ, ಶ್ರದ್ಧಾ ಗೆಳೆಯರ ಬಳಗದ ಅಧ್ಯಕ್ಷ ಶ್ರೀಧರ್ ದೇರಾಜೆ, ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಕಾರ್ಯದರ್ಶಿ ಶ್ರೀಧರ್ ಬಳಕ್ಕ ಹಾಗೂ ಸಮಿತಿಗಳ ಸಂಚಾಲಕರು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ನಿಸ್ತಾ ಆಲಂಬಿಲ ಪ್ರಾರ್ಥಿಸಿ, ಶ್ರೀನಾಥ್ ಬಡೆಕಾಯಿಲು ಸ್ವಾಗತಿಸಿ, ಯೋಗೀಶ್ ಆಲಂಬಿಲ ಪ್ರಾಸ್ತಾವಿಸಿದರು. ಕೇಶವ ಹಳ್ಳಿಂಗೇರಿ ಕಾರ್ಯಕ್ರಮ ನಿರೂಪಿಸಿದರು. ಶಿವಾನಂದ ಸಂಕೇಶ ಧನ್ಯವಾದವಿತ್ತರು.

ಸಂಜೆ ಶಾಸಕ ಹರೀಶ್ ಪೂಂಜಾ ಆಗಮಿಸಿ ಭಜನಾ ಮಂದಿರಕ್ಕೆ ಶುಭಹಾರೈಸಿದರು.

ರಾತ್ರಿ ಚಿದಾನಂದ ಅದ್ಯಪಾಡಿ ನಿರ್ದೇಶನದ ವಿಧಾತ್ರೀ ಕಲಾವಿದೆರ್ ಕೈಕಂಬ ಕುಡ್ಲ (ರಿ) ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಇವರ ಸಲಹೆ ಸಹಕಾರದೊಂದಿಗೆ ವಿಭಿನ್ನ ಶೈಲಿಯಲ್ಲಿ ‘ದೈವರಾಜೆ ಶ್ರೀ ಬಬ್ಬು ಸ್ವಾಮಿ’ ಭಕ್ತಿಪ್ರದಾನ ತುಳು ನಾಟಕ ನಡೆಯಿತು.

Related posts

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭೇಟಿ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!