23.7 C
ಪುತ್ತೂರು, ಬೆಳ್ತಂಗಡಿ
May 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಜಿಲ್ಲಾ ಬಂದ್‌ಗೆ ತಾಲೂಕಿನಲ್ಲಿ ಬೆಂಬಲ: ಅಂಗಡಿ-ಮುಂಗಟ್ಟುಗಳು ಬಂದ್; ಸಂಚಾರ ಸ್ಥಗಿತಗೊಳಿಸಿದ ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ಗಳು

ಬೆಳ್ತಂಗಡಿ: ಬಜ್ಪೆಯ ಕಿನ್ನಿಪದವು ಎಂಬಲ್ಲಿ ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಹಿಂದೂ ಸಂಘಟನೆಗಳು ನೀಡಿದ ಜಿಲ್ಲಾ ಬಂದ್ ಕರೆಯಂತೆ ಬೆಳ್ತಂಗಡಿ ತಾಲೂಕಿನ ಪೇಟೆಗಳಲ್ಲಿ ವ್ಯಾಪಾರಸ್ಥರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್‌ಗೊಳಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಧರ್ಮಸ್ಥಳದಲ್ಲಿ ಅಂಗಡಿ ಮುಂಗಟ್ಟು ಸಂಪೂರ್ಣ ಬಂದ್


ಬೆಳಿಗ್ಗೆ ಉಜಿರೆ, ಧರ್ಮಸ್ಥಳ, ಗುರುವಾಯಕೆರೆ, ಮಡಂತ್ಯಾರು, ಶಿಶಿಲ ಸೇರಿದಂತೆ ಪ್ರಮುಖ ಪೇಟೆಗಳಲ್ಲಿ ಭಾಗಶಃ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿತ್ತು. ಕೆಲವು ಕಡೆಗಳಲ್ಲಿ ಅಂಗಡಿ, ಮುಂಗಟ್ಟುಗಳು, ಹೋಟೆಲ್‌ಗಳು ತೆರೆದುಕೊಂಡಿದ್ದು, ಎಂದಿನಂತೆ ವ್ಯಾಪಾರ ನಡೆಸಿದ್ದವು.


ಸುಮಾರು 11 ಗಂಟೆಯ ನಂತರ ಎಲ್ಲಾ ಅಂಗಡಿ-ಹೋಟೆಲ್‌ಗಳು ಬಂದ್ ಆಗಿವೆ. ಅದುವರೆಗೆ ಒಂದೋದು ಕೆಎಸ್ಸಾರ್ಟಿಸಿ ಬಸ್ ಹಾಗೂ ಖಾಸಗಿ ಬಸ್ ಸಂಚರಿಸುತ್ತಿದ್ದು, ಅದು ಸಹ ಸಂಚಾರವನ್ನು ಸ್ಥಗಿತಗೊಳಿಸಿವೆ. ಬೆಳಿಗ್ಗೆ ಜೈನಪೇಟೆ ಸಮೀಪ ಖಾಸಗಿ ಬಸ್‌ವೊಂದಕ್ಕೆ ಕಿಡಿಗೇಡಿಗಳು ಕಲ್ಲು ಹೊಡೆದ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೇ 6 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಜಿಲ್ಲಾ ಬಂದ್‌ಗೆ ಕರೆ ನೀಡಿದ್ದು, ಬೆಳ್ತಂಗಡಿಯಲ್ಲಿ ವಿಶ್ವಹಿಂದೂ ಪರಿಷತ್, ಬಜರಂಗದಳ ಹಾಗೂ ಭಾರತೀಯ ಜನತಾ ಪಾರ್ಟಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದೆ. ಬಂದ್ ಕರೆ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಬೆಳಿಗ್ಗೆ ಬಸ್‌ಗಳಿಲ್ಲದೆ ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳು ಪರದಾಟ ನಡೆಸಬೇಕಾಯಿತು. ಕೆಲವೊಂದು ಶಾಲೆಗಳಿಗೆ ಮಕ್ಕಳು ಬಂದು ಹಿಂತಿರುಗಿ ಮನೆಗೆ ಹೋಗಿದ್ದಾರೆ. ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯಂತೆ ತಾಲೂಕಿನ ಎಲ್ಲಾ ಪೊಲೀಸ್ ಠಾಣೆಯ ಪೊಲೀಸರು ಬಂದೋಬಸ್ತ್ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

Related posts

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya
error: Content is protected !!