24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸುತ್ತೇನೆ. ಈ ಕೃತ್ಯವನ್ನು ನಡೆಸಿದ ದುಷ್ಕರ್ಮಿಗಳನ್ನು ಪೊಲೀಸರು ಶೀಘ್ರವಾಗಿ ಬಂಧಿಸಿ ಅವರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್ ಆಗ್ರಹಿಸಿದ್ದಾರೆ.


ರಾತ್ರಿ ಹೊತ್ತು ತನ್ನ ಸ್ನೇಹಿತರ ಜೊತೆ ಬರುತ್ತಿದ್ದ ಸುಹಾಸ್ ಶೆಟ್ಟಿಯವರನ್ನು ದುಷ್ಕರ್ಮಿಗಳ ತಂಡ ರಸ್ತೆಯಲ್ಲಿ ಮಾರಾಕಾಯುಧಗಳಿಂದ ಹಲ್ಲೆ ನಡೆಸಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಒಬ್ಬ ಹಿಂದೂ ಕಾರ್ಯಕರ್ತನನ್ನು ವಿನಾಕಾರಣ ಹತ್ಯೆ ಮಾಡಿರುವಂತಹದ್ದು ಖಂಡಿತ ಹಿಂದೂ ಸಮಾಜ ಸಹಿಸಿಕೊಳ್ಳಲು ಸಾಧ್ಯವಿಲ್ಲ, ನಡುರಸ್ತೆಯಲ್ಲಿ ಈ ರೀತಿ ಕೊಲೆ ನಡೆಯಬೇಕಾದರೆ ಇದಕ್ಕೆ ಪೊಲೀಸ್ ಇಲಾಖೆ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರದ ವೈಫಲ್ಯವೇ ಕಾರಣವಾಗಿದೆ. ಕಾನೂನು ಸುವ್ಯವಸ್ಥೆ ಈ ರಾಜ್ಯದಲ್ಲಿ ಹದಗೆಟ್ಟಿದೆ ಎಂಬುವುದನ್ನು ಇದು ಸೂಚಿಸುತ್ತದೆ. ಹಿಂದೂ ಕಾರ್ಯಕರ್ತರ ರಕ್ಷಣೆಗೋಸ್ಕರ ನಾವು ಬದ್ಧರಿದ್ದೇವೆ. ಈ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸಿ ಹತ್ಯೆ ನಡೆಸಿದ ದುಷ್ಕರ್ಮಿಗಳನ್ನು ಹಾಗೂ ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಯಾನಂದ ಗೌಡ ಆಗ್ರಹಿಸಿದ್ದಾರೆ.

Related posts

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೈಂಡರ್ ಕೊಡುಗೆ

Suddi Udaya
error: Content is protected !!