ಅಳದಂಗಡಿ : ಪ್ರಸಕ್ತ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗಿದ್ದು ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಹಾಜರಾದವರು 80 ವಿದ್ಯಾರ್ಥಿಗಳಲ್ಲಿ 79 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ ಶೇ.98.75 ಫಲಿತಾಂಶ ಲಭಿಸಿದೆ.
14 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 55 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ.