ಉಜಿರೆ: 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಟ್ಟು 95 ವಿದ್ಯಾರ್ಥಿಗಳಲ್ಲಿ 95 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.
40 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 52 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 3 ವಿದ್ಯಾರ್ಥಿ ದ್ವಿತೀಯ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ.
ಶಾರನ್ ಡಿಸೋಜ 623, ಗಾಯನ ಎಂ. ವೈ. 620, ವಿನಿಷ್ಯ 612 ಅತ್ಯುತ್ತಮ ಅಂಕ ಪಡೆದುಕೊಂಡಿದ್ದಾರೆ.