ಮಂಗಳೂರು; ಮೇ 01 ರಂದು ಮಂಗಳೂರಿನಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ.
ಇನ್ನು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಮೇ-2 ರಂದು ದಕ್ಷಿಣ ಕನ್ನಡ ಬಂದ್ ಗೆ ವಿಶ್ವಹಿಂದೂ ಪರಿಷತ್ ಕರೆ ಕೊಟ್ಟಿದೆ. ಪೊಲೀಸ್ ಇಲಾಖೆ ಈಗಾಗಲೇ ಜಿಲ್ಲೆಯಾದ್ಯಂತ ನಾಕಾಬಂದಿ ಮಾಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದೆ. ಹೆಚ್ಚಿನ ಭದ್ರತೆಗಾಗಿ ಇತರ ಜಿಲ್ಲೆಗಳಿಂದಲೂ ಪೊಲೀಸ್ ಸಿಬ್ಬಂದಿಯನ್ನು ಜಿಲ್ಲೆಗೆ ಕರೆಸಲಾಗಿದೆ.