30.2 C
ಪುತ್ತೂರು, ಬೆಳ್ತಂಗಡಿ
May 2, 2025
Uncategorized

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಖಂಡನೆ: ಜಿಲ್ಲಾ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ : ಬೆಳ್ತಂಗಡಿ ತಾಲೂಕಿನ ಪೇಟೆಗಳಲ್ಲಿ ಭಾಗಶಃ ಅಂಗಡಿ-ಮುಂಗಟ್ಟುಗಳು ಬಂದ್

ಬೆಳ್ತಂಗಡಿಯಲ್ಲಿ ಅಂಗಡಿ ಮುಗ್ಗಟ್ಟುಗಳು ಬಂದ್

ಮದ್ದಡ್ಕದಲ್ಲಿ ಅಂಗಡಿ ಮುಂಗಟ್ಟು ಬಂದ್

ಬೆಳ್ತಂಗಡಿ: ಬಜ್ಪೆಯ ಕಿನ್ನಿಪದವು ಎಂಬಲ್ಲಿ ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಹಿಂದೂ ಸಂಘಟನೆಗಳು ನೀಡಿದ ಜಿಲ್ಲಾ ಬಂದ್ ಕರೆಯಂತೆ ಬೆಳ್ತಂಗಡಿ ತಾಲೂಕಿನ ಉಜಿರೆ, ಧರ್ಮಸ್ಥಳ, ಗುರುವಾಯಕೆರೆ, ಮಡಂತ್ಯಾರು, ಶಿಶಿಲ ಸೇರಿದಂತೆ ಪ್ರಮುಖ ಪೇಟೆಗಳಲ್ಲಿ ಭಾಗಶಃ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿದೆ. ಕೆಲವು ಕಡೆಗಳಲ್ಲಿ ಅಂಗಡಿ ಮುಂಗಟ್ಟುಗಳು ತೆರೆದುಕೊಂಡಿದ್ದು, ಎಂದಿನಂತೆ ವ್ಯಾಪಾರ ನಡೆಸುತ್ತಿವೆ.

ಮಡಂತ್ಯಾರು ಅಂಗಡಿ ಮುಗ್ಗಟ್ಟುಗಳು ಬಂದ್

ನೆರಿಯಾದಲ್ಲಿ ಅಂಗಡಿ ಮುಗ್ಗಟ್ಟುಗಳು ಬಂದ್

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೇ 6 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಜಿಲ್ಲಾ ಬಂದ್‌ಗೆ ಕರೆ ನೀಡಿದ್ದು, ಬೆಳ್ತಂಗಡಿಯಲ್ಲಿ ವಿಶ್ವಹಿಂದೂ ಪರಿಷತ್, ಬಜರಂಗದಳ ಹಾಗೂ ಭಾರತೀಯ ಜನತಾ ಪಾರ್ಟಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದೆ. ತಾಲೂಕಿನ ಮಡಂತ್ಯಾರಿನಲ್ಲಿ ಅಂಗಡಿ-ಮುಂಗಟ್ಟುಗಳು ಬಹುತೇಕ ಬಂದ್ ಆಗಿದೆ. ಉಜಿರೆ ಹಾಗೂ ಬೆಳ್ತಂಗಡಿಯಲ್ಲಿ ಕೆಲವೊಂದು ಅಂಗಡಿಗಳನ್ನು ಬಿಟ್ಟರೆ ಉಳಿದವು ಬಂದ್ ಆಗಿದೆ. ಅಲ್ಲಲ್ಲಿ ಹೋಟೇಲ್‌ಗಳು ಕೆಲವೊದು ಸಣ್ಣ-ಪುಟ್ಟ ಅಂಗಡಿಗಳು ತೆರೆದುಕೊಂಡು ಎಂದಿನಂತೆ ವ್ಯಾಪಾರ ನಡೆಸುತ್ತಿವೆ.

ಉಜಿರೆಯಲ್ಲಿ ಅಂಗಡಿ ಮುಗ್ಗಟ್ಟುಗಳು ಬಂದ್

ಶಿಶಿಲದಲ್ಲಿ ಅಂಗಡಿ ಮುಗ್ಗಟ್ಟುಗಳು ಬಂದ್

ಬಂದ್ ಕರೆ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಬೆಳಿಗ್ಗೆ ಬಸ್‌ಗಳಿಲ್ಲದೆ ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳು ಪರದಾಟ ನಡೆಸಬೇಕಾಯಿತು. ಕೆಲವೊಂದು ಶಾಲೆಗಳಿಗೆ ಮಕ್ಕಳು ಬಂದು ಹಿಂತಿರುಗಿ ಮನೆಗೆ ಹೋಗಿದ್ದಾರೆ. ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯಂತೆ ತಾಲೂಕಿನ ಎಲ್ಲಾ ಪೊಲೀಸ್ ಠಾಣೆಯ ಪೊಲೀಸರು ಬಂದೋಬಸ್ತ್ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

Related posts

ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ

Suddi Udaya

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

Suddi Udaya

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

Suddi Udaya

ಬೆಳ್ತಂಗಡಿ ಹಳೆಕೋಟೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ, ಸಭಾವನದ ಉದ್ಘಾಟನೆಗೆ: ಆದಿಚುಂಚನಗಿರಿ ಸ್ವಾಮೀಜಿಗಳನ್ನು ಆಹ್ವಾನಿಸಿ ಅವರ ದಿವ್ಯಹಸ್ತದಿಂದಲೇ ಕಟ್ಟಡವನ್ನು ಉದ್ಘಾಟಿಸುವಂತೆ – ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮುಖಂಡರ ಆಗ್ರಹ

Suddi Udaya
error: Content is protected !!