ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸುತ್ತೇನೆ. ಈ ಕೃತ್ಯವನ್ನು ನಡೆಸಿದ ದುಷ್ಕರ್ಮಿಗಳನ್ನು ಪೊಲೀಸರು ಶೀಘ್ರವಾಗಿ ಬಂಧಿಸಿ ಅವರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್ ಆಗ್ರಹಿಸಿದ್ದಾರೆ.
ರಾತ್ರಿ ಹೊತ್ತು ತನ್ನ ಸ್ನೇಹಿತರ ಜೊತೆ ಬರುತ್ತಿದ್ದ ಸುಹಾಸ್ ಶೆಟ್ಟಿಯವರನ್ನು ದುಷ್ಕರ್ಮಿಗಳ ತಂಡ ರಸ್ತೆಯಲ್ಲಿ ಮಾರಾಕಾಯುಧಗಳಿಂದ ಹಲ್ಲೆ ನಡೆಸಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಒಬ್ಬ ಹಿಂದೂ ಕಾರ್ಯಕರ್ತನನ್ನು ವಿನಾಕಾರಣ ಹತ್ಯೆ ಮಾಡಿರುವಂತಹದ್ದು ಖಂಡಿತ ಹಿಂದೂ ಸಮಾಜ ಸಹಿಸಿಕೊಳ್ಳಲು ಸಾಧ್ಯವಿಲ್ಲ, ನಡುರಸ್ತೆಯಲ್ಲಿ ಈ ರೀತಿ ಕೊಲೆ ನಡೆಯಬೇಕಾದರೆ ಇದಕ್ಕೆ ಪೊಲೀಸ್ ಇಲಾಖೆ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರದ ವೈಫಲ್ಯವೇ ಕಾರಣವಾಗಿದೆ. ಕಾನೂನು ಸುವ್ಯವಸ್ಥೆ ಈ ರಾಜ್ಯದಲ್ಲಿ ಹದಗೆಟ್ಟಿದೆ ಎಂಬುವುದನ್ನು ಇದು ಸೂಚಿಸುತ್ತದೆ. ಹಿಂದೂ ಕಾರ್ಯಕರ್ತರ ರಕ್ಷಣೆಗೋಸ್ಕರ ನಾವು ಬದ್ಧರಿದ್ದೇವೆ. ಈ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸಿ ಹತ್ಯೆ ನಡೆಸಿದ ದುಷ್ಕರ್ಮಿಗಳನ್ನು ಹಾಗೂ ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಯಾನಂದ ಗೌಡ ಆಗ್ರಹಿಸಿದ್ದಾರೆ.