ಬೆಳ್ತಂಗಡಿ: ಕಳೆದ ಮಾರ್ಚ್/ಏಪ್ರಿಲ್ 2025 ರಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.97.14 ಫಲಿತಾಂಶ ಪಡೆದುಕೊಂಡಿದೆ.
ಪರೀಕ್ಷೆಗೆ ಹಾಜರಾದ 105 ವಿದ್ಯಾರ್ಥಿಗಳಲ್ಲಿ 102 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. 47 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 48 ವಿದ್ಯಾರ್ಥಿಗಳು ಪ್ರಥಮದರ್ಜೆ, 07 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತಿರ್ಣರಾಗಿರುತ್ತಾರೆ. ಕು. ಮಾನ್ಯ 619 ಅಂಕದೊಂದಿಗೆ ಶಾಲೆಗೆ ಪ್ರಥಮ ಸ್ಥಾನ, ಕು. ಸೌಜನ್ಯ ಎಸ್ ನ್ಯಾಕ್ 615 ಅಂಕಗಳೊಂದಿಗೆ ದ್ವಿತೀಯ ಸ್ಥಾನ, ಮತ್ತು ಕು. ಆಕರ್ಷ ಕೆ ಪೂಜಾರಿ 613 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿರುತ್ತಾರೆ.