May 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

ಮಂಗಳೂರು: ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ತತಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವರ್ಗಾಯಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಗೃಹ ಸಚಿವವರಿಗೆ ಬರೆದ ಪತ್ರದಲ್ಲಿ ಸಂಸದರು, ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಘಟನೆಯಿಂದ ನಾನು ದಿಗ್ಭ್ರಮೆಗೊಂಡಿದ್ದು, ಭೀಕರ ಕೊಲೆ ಕೃತ್ಯದ ಕುರಿತು ತೀವ್ರ ಆತಂಕ ಮತ್ತು ನೋವಿನಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ. ಈ ಘಟನೆಯು ಕರಾವಳಿ ಕರ್ನಾಟಕ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರತೆ, ಬಲಗೊಳ್ಳುತ್ತಿರುವ ಇಸ್ಲಾಮಿಕ್ ಮೂಲಭೂತವಾದ ಮತ್ತು ರಾಷ್ಟ್ರ ವಿರೋಧಿ ಶಕ್ತಿಗಳ ಅಟ್ಟಹಾಸಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಸುಹಾಸ್ ಶೆಟ್ಟಿ ಹತ್ಯೆಯು ಕರಾವಳಿ ಮಾತ್ರವಲ್ಲ ಇಡೀ ರಾಜ್ಯದ ಜನರನ್ನೇ ಬೆಚ್ಚಿ ಬೀಳುವಂತೆ ಮಾಡಿದೆ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಹಿಂದೆಯೂ ಇದೇ ರೀತಿಯಲ್ಲಿ ಬಿಜೆಪಿ ಕಾರ್ಯಕರ್ತರಾದ ಸುಳ್ಯದ ಪ್ರವೀಣ್ ನೆಟ್ಟಾರು ಅವರ ಹತ್ಯೆಯನ್ನು ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರು ನಡೆಸಿದ್ದರು. ಈ ಸಂಘಟನೆಯನ್ನು ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗಾಗಲೇ ನಿಷೇಧಿಸಿದೆ. ಇಷ್ಟಾಗಿಯೂ ಈಗ ಪ್ರವೀಣ್ ಮಾದರಿಯಲ್ಲೇ ಮತ್ತೊಬ್ಬ ಹಿಂದೂ ಯುವಕ ತನ್ನ ಕಳೆದುಕೊಂಡಿರುವ ಅತ್ಯಂತ ನೋವಿನ ವಿಚಾರ. ಈ ರೀತಿಯ ಹತ್ಯೆಯು ಈ ಪ್ರದೇಶದಲ್ಲಿ ಪಿಎಫ್ಐ ನಂತಹ ಮೂಲಭೂತವಾದಿ ಸಂಘಟನೆಗಳು ಇನ್ನೂ ಸ್ಲೀಪರ್ ಸೆಲ್ನಂತೆ ಜೀವಂತವಾಗಿರುವುದನ್ನು ಸ್ಪಷ್ಟಪಡಿಸುತ್ತದೆ. ತಮ್ಮ ಮಗನನ್ನು ಕಳೆದುಕೊಂಡಿರುವ ಸುಹಾಸ್ ಶೆಟ್ಟಿ ಅವರ ಕುಟುಂಬವು ದಿಗ್ಭ್ರಾಂತಗೊಂಡು ನ್ಯಾಯಕ್ಕಾಗಿ ಕಾಯುತ್ತಿದೆ. ಈ ಭಾಗದ ಚುನಾಯಿತ ಪ್ರತಿನಿಧಿಯಾಗಿ ಮತ್ತು ಇಲ್ಲಿನ ನೋವು ಹಾಗೂ ಹತಾಶೆಯನ್ನು ವೈಯಕ್ತಿಕವಾಗಿ ಕಂಡಿರುವ ವ್ಯಕ್ತಿಯಾಗಿ, ಈ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಈ ಕೂಡಲೇ ಎನ್ಐಎಗೆ ಹಸ್ತಾಂತರಿಸಬೇಕೆಂದು ಕ್ಯಾ. ಚೌಟ ಅವರು ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಭೀಕರ ಘಟನೆಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತರ ಕೈವಾಡದ ಸಾಧ್ಯತೆ ಇರುವುದರಿಂದ ಈ ಕುರಿತು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿರುವುದು ಅತ್ಯಗತ್ಯ. ದಕ್ಷಿಣ ಕನ್ನಡ ಮಾತ್ರವಲ್ಲ ಈ ದೇಶದ ಯಾವುದೇ ಭಾಗದಲ್ಲಿ ಮೂಲಭೂತವಾದಿ, ರಾಷ್ಟ್ರ ವಿರೋಧಿ ಮತ್ತು ಜಿಹಾದಿ ಮಾನಸಿಕತೆಯ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಈ ಕೊಲೆ ಕೃತ್ಯದ ಹಿಂದಿರುವ ಸಮಾಜ ಘಾತುಕ ಸಂಘಟನೆಗಳು, ಹತ್ಯೆ ಹಿಂದಿನ ಒಳಸಂಚು, ಇದರಲ್ಲಿ ಭಾಗಿಯಾದವರು ಹಾಗೂ ಕುಮ್ಮಕ್ಕು ನೀಡಿರುವ ದುಷ್ಟಶಕ್ತಿಯನ್ನು ಬುಡ ಸಮೇತ ಕಿತ್ತು ಹಾಕಬೇಕು. ಆ ಮೂಲಕ ಕಾನೂನಿಲ್ಲಿ ಇರುವ ಜನರ ವಿಶ್ವಾಸವನ್ನು ಮರುಸ್ಥಾಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸುಹಾಸ್ ಶೆಟ್ಟಿ ಅವರ ಹತ್ಯೆ ವಿಚಾರವಾಗಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಮಧ್ಯಪ್ರವೇಶಿಸಿ, ಕೇವಲ ಅಪರಾಧಿಗಳು ಮಾತ್ರವಲ್ಲದೆ ಅವರಿಗೆ ಬೆಂಬಲ ನೀಡಿದ ಮತ್ತು ಹಣಕಾಸು ನೆರವು ನೀಡಿದ ಎಲ್ಲರನ್ನು ತ್ವರಿತವಾಗಿ ನ್ಯಾಯದ ಮುಂದೆ ತರಲು ಕ್ರಮ ಕೈಗೊಳ್ಳಬೇಕೆಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಿನಂತಿಸಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya
error: Content is protected !!