ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಯಮಗಳನ್ನು ಉಲ್ಲಂಘಿಸಿ ಸಂಘದ ಬಗ್ಗೆ ಆರೋಪಗಳನ್ನು ಮಾಡಿ ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯ ಜಾರಪ್ಪ ಪೂಜಾರಿ ಹಾಗೂ ಮಂಜುನಾಥ ರೈ ಅವರನ್ನು ಸಂಘದ ಸದಸ್ಯತನದಿಂದ ಅಮಾನತು ಮಾಡಲಾಗಿದೆ.
ಮೇ 3ರಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸವಾ೯ನುಮತದಿಂದ ಈ ನಿರ್ಣಯವನ್ನು ಕೈಗೊಳ್ಳಲಾಯಿತು. ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಬಗ್ಗೆ ದುರುದ್ದೇಶದಿಂದ ಆರೋಪಗಳನ್ನು ಮಾಡಿ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಲಾಯಿತು.