ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ 2024 -25 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 12 ನೇ ಬಾರಿಗೆ 100% ಫಲಿತಾಂಶ ಬಂದಿರುತ್ತದೆ.
ವರ್ಷಿತಾ 625 ರಲ್ಲಿ 610 ಅಂಕಗಳನ್ನು ಪಡೆದಿದ್ದಾರೆ. ಒಟ್ಟು 30 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು,12 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಸಂಸ್ಥೆಯ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್, ಸಂಚಾಲಕರಾದ ಅಶ್ವಿತ್ ಕುಲಾಲ್ , ಪ್ರಾಂಶುಪಾಲರಾದ ಓಮನ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಹಾಗೂ ಎಲ್ಲಾ ಶಿಕ್ಷಕ ವೃಂದದವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.