ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು 2025-2026ನೇ ಇದರ ನೂತನ ಪದಾಧಿಕಾರಿಗಳ ಆಯ್ಕೆ ಮೇ 1 ರಂದು ನಡೆಸಲಾಯಿತು.
ಮಂಡಳಿಯ ಅಧ್ಯಕ್ಷರಾಗಿ ಪ್ರಭಾಕರ ನಾಯ್ಕ ಹಾಗೂ ಕಾರ್ಯದರ್ಶಿಯಾಗಿ ಹರೀಶ್ ಕುಲಾಲ್ ವಿತೊಟ್ಟು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಚಿನ್ ಮಾತ್ಯೋಲು , ಜೊತೆ ಕಾರ್ಯದರ್ಶಿಯಾಗಿ ಪ್ರಶಾಂತ್ ಮಡೆಮಾರು, ಕೋಶಾಧಿಕಾರಿಯಾಗಿ ಪ್ರಸಾದ್ ನಲ್ಲರಗುತ್ತು, ಸಂಘಟನೆ ಕಾರ್ಯದರ್ಶಿಯಾಗಿ ಶ್ರವಣ್ ದೆರೊಟ್ಟು, ಭಜನಾ ಸಂಚಲಕರಾಗಿ ಜಗನ್ನಾಥ ಕುಲಾಲ್, ಬೈರೊಟ್ಟು ಮತ್ತು ಕಮಲಾಕ್ಷಿ ಎಸ್ ಯನ್ ರಾವ್ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಆಡಳಿತ ಮುಖ್ಯಸ್ಥರು ಆಡಳಿತ ಸಮಿತಿ ಸದಸ್ಯರು ಭಜನಾ ಮಂಡಳಿ ಅಧ್ಯಕ್ಷರು ಸರ್ವ ಸದಸ್ಯರು ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು ಸರ್ವ ಸದಸ್ಯರು ಉಪಸ್ಥಿತರಿದ್ದರು.