ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯವರದಿ

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಸಚಿವ ಚೆಲುವರಾಯ ಸ್ವಾಮಿ ರವರು ಬೆಳ್ತಂಗಡಿ ತಾಲೂಕಿನ ಪ್ರವಾಸ ಕೈಗೊಂಡಿದ್ದು ಮೇ 4ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಮಾಜಿ ಸದಸ್ಯ ವಿಶ್ವನಾಥ್ ಕೊಲ್ಲಾಜೆ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ.ಟಿ ಸಭಾಸ್ಟೀಯನ್, ಯುವ ಕಾಂಗ್ರೆಸ್ ಅಧ್ಯಕ್ಷ ಅಝರ್ ನಾವೂರು, ಉಪಾಧ್ಯಕ್ಷರುಗಳಾದ ನವೀನ್ ಗೌಡ ಸವಣಾಲು, ಅರುಣ್ ಲೊಬೋ ಓಡಿಲ್ನಾಲ, ಮುಖಂಡರಾದ ಪ್ರಶಾಂತ್ ಮಚ್ಚಿನ, ಗಣೇಶ್ ಕಾಶಿ ಕೊಕ್ಕಡ, ಧರಣೇಶ್ ಕೊಕ್ಕಡ, ಶ್ರೀಧರ್ ರಾವ್ ಕಳೆಂಜ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಬಳಿಕ ಧರ್ಮಸ್ಥಳಕ್ಕೆ ಆಗಮಿಸಿ ವಸತಿಗೃಹದಲ್ಲಿ ತಂಗಿ, ನಾಳೆ ಸೋಮವಾರ ಶ್ರೀ ಮಂಜುನಾಥ ದೇವರ ದರ್ಶನ ಬಳಿಕ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ ನ ರೈತರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ‌. ನಂತರ ದ.ಕ, ಉಡುಪಿ ಜಿಲ್ಲೆಯ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

Related posts

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬಳಂಜ.ಬದಿನಡೆ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

Suddi Udaya

ಮಂಗಳೂರು ವಿವಿ ಅಂತರ್ ಕಾಲೇಜು ನೆಟ್‌ಬಾಲ್ ಪಂದ್ಯಾಟ : ಉಜಿರೆಯ ಎಸ್‌.ಡಿ.ಎಂ ಚಾಂಪಿಯನ್ಸ್

Suddi Udaya

ಕಣಿಯೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!