ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಸಚಿವ ಚೆಲುವರಾಯ ಸ್ವಾಮಿ ರವರು ಬೆಳ್ತಂಗಡಿ ತಾಲೂಕಿನ ಪ್ರವಾಸ ಕೈಗೊಂಡಿದ್ದು ಮೇ 4ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿ.ಪ. ಮಾಜಿ ಶಾಸಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಮಾಜಿ ಸದಸ್ಯ ವಿಶ್ವನಾಥ್ ಕೊಲ್ಲಾಜೆ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ.ಟಿ ಸಭಾಸ್ಟೀಯನ್, ಯುವ ಕಾಂಗ್ರೆಸ್ ಅಧ್ಯಕ್ಷ ಅಝರ್ ನಾವೂರು, ಉಪಾಧ್ಯಕ್ಷರುಗಳಾದ ನವೀನ್ ಗೌಡ ಸವಣಾಲು, ಅರುಣ್ ಲೊಬೋ ಓಡಿಲ್ನಾಲ, ಮುಖಂಡರಾದ ಪ್ರಶಾಂತ್ ಮಚ್ಚಿನ, ಗಣೇಶ್ ಕಾಶಿ ಕೊಕ್ಕಡ, ಧರಣೇಶ್ ಕೊಕ್ಕಡ, ಶ್ರೀಧರ್ ರಾವ್ ಕಳೆಂಜ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬಳಿಕ ಧರ್ಮಸ್ಥಳಕ್ಕೆ ಆಗಮಿಸಿ ವಸತಿಗೃಹದಲ್ಲಿ ತಂಗಿ, ನಾಳೆ ಸೋಮವಾರ ಶ್ರೀ ಮಂಜುನಾಥ ದೇವರ ದರ್ಶನ ಬಳಿಕ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ ನ ರೈತರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ದ.ಕ, ಉಡುಪಿ ಜಿಲ್ಲೆಯ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.