September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ನರಸಿಂಹಗಡ ನಡ ಗ್ರಾಮ ಇದರ ವತಿಯಿಂದ ನಡ ಗ್ರಾಮದ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದ ವಠಾರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಮೇ 3 ರಿಂದ ಪ್ರಾರಂಭಗೊಂಡು ಮೇ 4ರವರೆಗೆ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಮೇ 4 ರಂದು ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಗೌರವಾಧ್ಯಕ್ಷ ಹಾಗೂ ಶಾಸಕ ಹರೀಶ್ ಪೂಂಜ ವಹಿಸಿದರು.

ಪ್ರಧಾನ ಭಾಷಣಗಾರರಾಗಿ ಮಂಗಳೂರು ಶ್ರೀ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ,

ಗೌರವ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಬಂಗಾಡಿ ಅರಮನೆಯ ಯಶೋಧರ ಬಳ್ಳಾಲ್, ಡಾ| ಎಂ.ಎಂ. ದಯಾಕರ್ ಉಜಿರೆ, ಜಿ.ಪಂ. ಮಾಜಿ ಉಪಾಧ್ಯಕ್ಷೆ ಶ್ರೀಮತಿ ರಾಜಶ್ರೀ ಹೆಗ್ಡೆ, ಲಾಯಿಲ ದೇವಸ್ಥಾನದ ಪ್ರತಿನಿಧಿ ಸುನಿಲ್ ಶೆಣೈ, ವೇಣೂರು ದೇವಸ್ಥಾನದ ಪುರುಷೋತ್ತಮ ರಾವ್, ಬೆಂಗಳೂರು ಕಿಮ್ಸ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಪ್ರೇಮ್ ಕುಮಾರ್ ಬೋಜಾರ, ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ವಸಂತ ಶೆಟ್ಟಿ ಶ್ರದ್ಧಾ, ಸುರ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಸತೀಶ್ಚಂದ್ರ, ಹಿರಿಯ ವಕೀಲರಾದ ಸುಬ್ರಹ್ಮಣ್ಯ ಆಗರ್ತ, ಜಿ.ಪಂ. ಮಾಜಿ ಸದಸ್ಯ ರಾಜಶೇಖರ್ ಅಜ್ರಿ, ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಧನಂಜಯ ಅಜ್ರಿ ನಡಗುತ್ತು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಅಜಿತ್ ಆರಿಗ, ಪ್ರಧಾನ ಕಾರ್ಯದರ್ಶಿ ಕರುಣಾಕರ ಗೌಡ ಬೋಜಾರ, ಕೋಶಾಧಿಕಾರಿಗಳಾದ ಪುರುಷೋತ್ತಮ್ ಶೆಣೈ, ಚೆನ್ನ ಕೇಶವ ಗೌಡ ಬೋಜಾರ, ಸಮಿತಿ ಪ್ರಧಾನ ಸಂಚಾಲಕ ನವೀನ್ ನೆರಿಯ, ಸಮಿತಿಯ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಪ್ರಾಪ್ತಿ ಮತ್ತು ಸುಕೇಶ್ ಶೆಟ್ಟಿ ಪ್ರಾರ್ಥಿಸಿ, ಸಮಿತಿಯ ಅಧ್ಯಕ್ಷ ಡಾ| ಪ್ರದೀಪ್ ನಾವೂರು ಪ್ರಾಸ್ತವಿಕದೊಂದಿಗೆ ಸ್ವಾಗತಿಸಿದರು. ಶಿಕ್ಷಕ ಅಜಿತ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಸಂಜೆ ನಡ ಪೇಟೆಯಿಂದ ವೈಭವೋಪೇತ ಶೋಭಾಯಾತ್ರೆ ಜರುಗಿತು. ನಂತರ ತಿರುಪತಿ ದೇವಸ್ಥಾನದ ಅರ್ಚಕರಾದ ಡಾ| ಎನ್. ತನುಜಾ ವಿಷ್ಣುವರ್ಧನ್ ಇವರ ಮಾಗದರ್ಶದಲ್ಲಿ ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಜರುಗಿತು.

Related posts

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

Suddi Udaya

ಅ.ಭಾ.ಸಾ.ಪ. ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya
error: Content is protected !!