26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಅರಿವು ಕೇಂದ್ರ ಮತ್ತು ಡಿಜಿಟಲ್ ಗ್ರಂಥಾಲಯ ಇದರ ವತಿಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಮೇ 05ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಹೇಮಾವತಿ ವಲಯ ತರಬೇತುದಾರರು ಜೆಸಿಐ ಇಂಡಿಯಾ ಇವರು ಮಕ್ಕಳಿಗೆ ವಿವಿಧ ಚಟುವಟಿಕೆಯನ್ನು ನೀಡುವುದರ ಮೂಲಕ ಬೇಸಿಗೆ ಶಿಬಿರವನ್ನು ಯಶಸ್ವಿಯಾಗಿ ನಡೆಸಿದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಮತ್ತು ಸದಸ್ಯರಾದ ಶ್ರೀಮತಿ ಸುಮಲತಾ, ಚಂದ್ರರಾಜ ಎಂ, ಶ್ರೀಮತಿ ದೀಪಿಕಾ ಹಾಗೂ ಗ್ರಂಥಪಾಲಕಿ ಶ್ರೀಮತಿ ಚಂದ್ರಾವತಿಯವರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಗಣೇಶ್ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಈ ಬೇಸಿಗೆ ಶಿಬಿರದ ಆರಂಭದ ದಿನದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ಮಕ್ಕಳು ವಿವಿಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು.

Related posts

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಕಾನೂನು ಅರಿವು ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಕರಣದಲ್ಲಿ ಸರಕಾರ ತುರ್ತು ನಿರ್ಧಾರ ಮಾಡಿದೆ : ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು: ಶಾಸಕ ಕಿಶೋರ್ ಕುಮಾರ್ ಪುತ್ತೂರು

Suddi Udaya

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಖೋ-ಖೋ ಪಂದ್ಯಾಟ: ಕೊಕ್ಕಡ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya
error: Content is protected !!