25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ: ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಘಟನೆ ಮೇ 3 ರಂದು ನಡೆದಿದೆ.

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಲತಾ ಎಂಬ ಮಹಿಳೆ ಮೇ 02 ರಂದು ಆಂಧ್ರಪ್ರದೇಶದ ನೆಲ್ಲೂರು ನಿಂದ ಒಂದು ಬಾಡಿಗೆ ಇನ್ನೋವಾ ಕಾರಿನಲ್ಲಿ ಹೊರಟು ಮೇ 03 ರಂದು ಸಂಜೆ 05-00 ಘಂಟೆಗೆ ಧರ್ಮಸ್ಥಳಕ್ಕೆ ತಲುಪಿರುತ್ತಾರೆ. ದೇವರ ದರ್ಶನಕ್ಕೆ ಹೋಗುವ ಮೊದಲು ಲತಾ ಅವರು ಕಾರ್ಯಕ್ರಮಕ್ಕೆಂದು ಜೊತೆಯಲ್ಲಿ ತಂದಿದ್ದ ಚಿನ್ನಾಭರಣಗಳಾದ ಬ್ರಾಸ್ ಲೈಟ್, ಚಿನ್ನದ ಚೈನ್, ನೆಕ್ಲೆಸ್ ನ್ನು ವ್ಯಾನಿಟಿಕ್ ಬ್ಯಾಗ್ ನ ಒಳಗಡೆ ಪ್ಲಾಸ್ಟಿಕ್ ಡಬ್ಬದಲ್ಲಿ ಹಾಕಿ ಬ್ಯಾಗ್ ನಲ್ಲಿ ಇಟ್ಟುಕೊಂಡು ದೇವರ ದರ್ಶನವನ್ನು ಮುಗಿಸಿ ಹೊರಡುವ ಸಮಯದಲ್ಲಿ ಬ್ಯಾಗನ್ನು ನೋಡಿದಾಗ ವ್ಯಾನಿಟಿಕ್ ಬ್ಯಾಗಿನ ಜಿಪ್ಪು ತೆರೆದಿದ್ದು. ಬ್ಯಾಗ್ ನ ಒಳಗಡೆ ನೋಡಿದಾಗ ಬ್ಯಾಗ್ ನ ಒಳಗಡೇ ಪ್ಲಾಸ್ಟಿಕ್ ಬಾಕ್ಸಲ್ಲಿ ಇಟ್ಟಿದ್ದ 97 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿದ್ದು, ಒಟ್ಟು ಮೌಲ್ಯ ರೂ 6,79,000/- ಆಗಿರುತ್ತದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆ ಅ ಕ್ರ 17/2025 ಕಲಂ: 303(2) ಬಿಎನ್ ಎಸ್ 2023ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya

ಜು.3 ರಂದು ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ಅಧ್ಯಕ್ಷ ಪೂರನ್ ವರ್ಮ ಮತ್ತು ತಂಡದ ಸಾಧನೆಗೆ ರೋಟರಿ ಕ್ಲಬ್ ಬೆಳ್ತಂಗಡಿಗೆ “ಡೈಮಂಡ್ ಕ್ಲಬ್ ಪ್ರಶಸ್ತಿ”ಯ ಗೌರವ: 2025-26 ನೇ ಸಾಲಿನ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಚನ್ನಕೇಶವ ಆಯ್ಕೆ

Suddi Udaya

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಎಸ್‌ಪಿಬಿ ಗಾಯನೋತ್ಸವದಲ್ಲಿ ಮಿತ್ತಬಾಗಿಲಿನ ವಿಜಯಲಕ್ಷ್ಮಿ ಶೆಟ್ಟಿ ಅವರಿಂದ ಗಾಯನ

Suddi Udaya
error: Content is protected !!