ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಮೈರೋಳ್ತಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಾಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೇ 5 ರಂದು ಮೈರೋಳ್ತಡ್ಕ ವಠಾರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು.

ಪೂಜಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೂಜಾ ಸಮಿತಿಯ ಅಧ್ಯಕ್ಷ ಚಂದಪ್ಪ ಗೌಡ ನಡುಮಜಲು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿ ಅಶೋಕ್ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಮಾರು 46 ಕಾರ್ಯಕ್ರಮಗಳನ್ನು ಜನರಿಗಾಗಿ ರೂಪಿಸಿದೆ. ಅದರಲ್ಲಿ ಧಾರ್ಮಿಕ ಕಾರ್ಯಕ್ರಮವು ಒಂದು. ಜನರ ಸಂಘಟನೆಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಪೂಜ್ಯರು ಈ ಕಾರ್ಯಕ್ರಮವನ್ನು ರೂಪಿಸಿದರು. ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಜನರಲ್ಲಿ ಉಳಿತಾಯದ ಮನೋಭಾವನೆಯನ್ನು ಮೂಡಿಸಿ ಉಳಿತಾಯದ ಕನಸನ್ನ ಕೊಟ್ಟಂತಹ ಯೋಜನೆ ಜನರ ಬದುಕಿಗೆ ಆಸರೆಯಾಗಿದೆ. ಯೋಜನೆಯು ಜನರಲ್ಲಿ ಆರ್ಥಿಕ ಜಾಗೃತಿ, ಆರ್ಥಿಕ ಸಾಕ್ಷರತೆಯನ್ನು ಮೂಡಿಸಿದೆ ಎಂದರು. ನಮ್ಮ ಧಾರ್ಮಿಕ ಕಾರ್ಯಕ್ರಮಗಳು, ನಮ್ಮ ಪರಂಪರೆಗಳು, ನಮ್ಮ ಗುರುಹಿರಿಯರ ಸಂಬಂಧ, ಆಶೀರ್ವಾದಗಳು ಉಳಿಯಬೇಕಾದರೆ ಸತ್ಯನಾರಾಯಣ ಪೂಜೆ ಯಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಾವೆಲ್ಲರೂ ಒಟ್ಟಾಗಿ ಭಾಗಿಗಳಾಗಿ ಮುಂದುವರಿಸಿದರೆ ಮುಂದಿನ ಪೀಳಿಗೆಗೆ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು. ಸತ್ಕಾರ್ಯ ಕ್ಕೆ ಸತ್ಪಲ ಖಚಿತ ಎಂಬ ಮಾತಿನಂತೆ ಇಂತಹ ಧಾರ್ಮಿಕ ಕಾರ್ಯಕ್ರಮಗಳು ಇನ್ನಷ್ಟು ನಡೆಯಲಿ ದೇವರ ಪೂರ್ಣ ಅನುಗ್ರಹವಿರಲಿ ಎಂದು ಶುಭ ಹಾರೈಸಿದರು.

ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಖಂಡಿಗ, ಒಕ್ಕೂಟದ ಅಧ್ಯಕ್ಷ ಸುಂದರ ಪೂಜಾರಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಕೃಷ್ಣಯ್ಯ ಆಚಾರ್ಯ, ಕಣಿಯೂರು ವಲಯ ಮೇಲ್ವಿಚಾರಕರಾದ ಕುಮಾರಿ ಶಿಲ್ಪಾ ಉಪಸ್ಥಿತರಿದ್ದರು.


ಡಾಕಯ್ಯ ಗೌಡ ಖಂಡಿಗ ಕಾರ್ಯಕ್ರಮ ನಿರೂಪಿಸಿ, ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಸ್ವಾಗತಿಸಿ, ಒಕ್ಕೂಟದ ಕಾರ್ಯದರ್ಶಿ ಹರಿಣಾಕ್ಷಿ ಧನ್ಯವಾದವಿತ್ತರು.

Related posts

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya

ಉಜಿರೆ ಮೆಸ್ಕಾಂ‍ನ ಸಹಾಯಕ ಇಂಜಿನಿಯರ್ ವಸಂತ ಟಿ. ರವರು ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಇಂಜಿನಿಯರ್ ಹುದ್ದೆಗೆ ನಿಯೋಜನೆ

Suddi Udaya
error: Content is protected !!