ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ಇಂದಬೆಟ್ಟು ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವವು ಮೇ. 4ರಂದು ಪ್ರಾರಂಭಗೊಂಡು ಮೇ.8ರವರೆಗೆ ನಡೆಯುತ್ತಿದೆ.

ಮೇ 5 ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಗಿರಿಯಪ್ಪ ಗೌಡ ವಹಿಸಿದ್ದರು. ಬೆಳ್ತಂಗಡಿಯ ವಕೀಲರಾದ ಬಿ.ಕೆ ಧನಂಜಯ ರಾವ್ ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಾವೂರು ಇದರ ಅಧ್ಯಕ್ಷರು ಹಾಗೂ ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲ್ಯಾನ್ ಆಗಮಿಸಿದ್ದರು.

ಜಾತ್ರೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ. ಪ್ರದೀಪ್ ಎ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸತೀಶ್ ಮನ್ನಡ್ಕ ಕಾರ್ಯಕ್ರಮ ನಿರೂಪಿಸಿದರು. ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ವಸಂತ ಗೌಡ ಕಲ್ಲಾಜೆ ಧನ್ಯವಾದವಿತ್ತರು. ಶಾಸಕ ಹರೀಶ್ ಪೂಂಜರವರು ಆಗಮಿಸಿ ದೇವರ ದರ್ಶನ ಪಡೆದು ಬಲಿ ಉತ್ಸವದಲ್ಲಿ ಪಾಲ್ಗೊಂಡಿದ್ದರು.