ಗುರುವಾಯನಕೆರೆ: ಗ್ರಾಮ ಪಂಚಾಯತ್ ಕುವೆಟ್ಟು ಹಾಗೂ ಪಂಚಾಯತ್ ಗ್ರಂಥಾಲಯ ಮಾಹಿತಿ ಕೇಂದ್ರಗಳ ಆಶ್ರಯದಲ್ಲಿ ಓದುವ ಬೆಳಕು ಕಾರ್ಯಕ್ರಮದಡಿಯಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಐದು ದಿನಗಳ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್ ಶೆಟ್ಟಿ ಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಪಂಚಾಯತ್ ಸದಸ್ಯರಾದ ಮಂಜುನಾಥ್ ಕುಂಬ್ಳೆ, ಶ್ರೀಮತಿ ವೇದಾವತಿ, ಕಾರ್ಯದರ್ಶಿ ಶ್ರೀಮತಿ ಸೇವಂತಿ, ಗ್ರಂಥಾಪಾಲಕಿ ಶ್ರೀಮತಿ ವಸಂತಿ, ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಶಾ ಕಾರ್ಯಕರ್ತೆ ಶ್ರೀಮತಿ ಜಲಜಾಕ್ಷಿ ಉಪಸ್ಥಿತರಿದ್ದರು. ಮಕ್ಜಳಿಗೆ ವಿವಿಧ ಚಟುವಟಿಕೆ ಮತ್ತು ಮಾಹಿತಿ ನೀಡಲಾಯಿತು. ಪಂಚಾಯತ್ ಸಿಬಂದಿ ಆನಂದ್ ಕೋಟ್ಯಾನ್ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.