ಬೆಳಾಲು : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೬೨೨ ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಹಾಗೂ ಸರಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬಿಜೆಪಿಯ ಸಕ್ರೀಯ ಕಾರ್ಯಕರ್ತ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್ ಮತ್ತು ಶ್ರೀಮತಿ ಯಶೋಧ ದಂಪತಿಯ ಪುತ್ರಿ ಕು.ಮನಶ್ರೀ ಇವರನ್ನು ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ, ಜಯಾನಂದ ಗೌಡ ಉಪಸ್ಥಿತರಿದ್ದರು.