
ಬೆಳ್ತಂಗಡಿ : ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಲಿ ಎಂದು ದೇವರಲ್ಲಿ

ಪ್ರಾರ್ಥಿಸಿ ವಿಶೇಷ ಸಂಕಲ್ಪದೊಂದಿಗೆ ಪೂಜೆಯನ್ನು ಮೇ 8 ರಂದು ಬೆಳಿಗ್ಗೆ 8.ಗಂಟೆಗೆ ಶ್ರೀ ಕ್ಷೇತ್ರ ಚಂದ್ರಪುರದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಮತ್ತು ಮಹಾಮಾತೆ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಿದರು.