September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆಯಾಗಿದ್ದು, ಪೋಪ್ ಲಿಯೋ XIV ಹೆಸರಿನಿಂದ ಅವರು ಇನ್ನು ಮುಂದೆ ಪೋಪ್‌ ಆಗಿ ಗುರುತಿಸಿಕೊಳ್ಳಲಿದ್ದಾರೆ. ರೋಮ್ ಧರ್ಮಕ್ಷೇತ್ರದ 267ನೇ ಧರ್ಮಾಧ್ಯಕ್ಷರ ಆಯ್ಕೆಯ ವಿಚಾರವನ್ನು ಮೇ 8 ರಂದು ರಾತ್ರಿ ಕಾರ್ಡಿನಲ್ ಪ್ರೋಟೋ-ಡೀಕನ್ ಡೊಮಿನೀಕ್ ಮಾಂಬೆರ್ತಿ ಅವರು ಜನತೆಗೆ ಈ ಸುದ್ದಿಯನ್ನು ಘೋಷಿಸಿದರು.

ನಿಮಗೆಲ್ಲರಿಗೂ ನಾನು ಸಂತೋಷದ ಸುದ್ದಿಯನ್ನು ಪ್ರಕಟಿಸುತ್ತೇನೆ : ನಮ್ಮ ವಿಶ್ವಗುರುವಿನ ಆಯ್ಕೆಯಾಗಿದೆ ಎಂದು ಮಾಂಬೆರ್ತಿ ಘೋಷಣೆ ಕೂಗಿ ಪೋಪ್‌ ಆಯ್ಕೆಯನ್ನು ಪ್ರಕಟಿಸಿದರು.

ಕ್ಯಾಥೋಲಿಕ್ ಚರ್ಚ್ ನ 2,000 ವರ್ಷಗಳ ಇತಿಹಾಸದಲ್ಲಿ ಮೊದಲ ಅಮೆರಿಕನ್ ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆಯಾಗಿದ್ದಾರೆ. ಹೊಸದಾಗಿ ಚುನಾಯಿತರಾದ ಪೋಪ್ ಲಿಯೋ XIV ಗುರುವಾರ ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಬೆಸಿಲಿಕಾದ ಬಾಲ್ಕನಿಯಲ್ಲಿ ಸಾಂಪ್ರದಾಯಿಕ ಧಿರಿಸಿನಲ್ಲಿ ಕಾಣಿಸಿಕೊಂಡು ಜನತೆಗೆ ಕೈಬೀಸಿದರು. ಈ ವೇಳೆ ‘ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ಎಲ್ಲರೂ ಪರಸ್ಪರ ಕೈಜೋಡಿಸಬೇಕು’ ಎಂದು ಕರೆ ನೀಡಿದರು. ‘ಮಾತುಕತೆಗಳ ಮೂಲಕ ಸೇತುವೆ ನಿರ್ಮಿಸಿ ಎಲ್ಲರೂ ಪರಸ್ಪರ ಹತ್ತಿರವಾಗಬೇಕು. ಜಗತ್ತಿನಲ್ಲಿ ಸದಾ ಶಾಂತಿ ನೆಲೆಸಲಿ’ ಎಂದು ಹೇಳಿದರು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಮಿತ್ತಬಾಗಿಲು: ಮನೆಯ ಒಳಗೆ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಉರಗ ತಜ್ಞ ಸ್ನೇಕ್ ಜಾಯ್

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ: ರಥೋತ್ಸವ- ಇಂದು ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಬರೆಂಗಾಯ ನಿವಾಸಿ ನಾರಾಯಣ ಎಂ.ಕೆ ಅಸೌಖ್ಯದಿಂದ ನಿಧನ

Suddi Udaya

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya
error: Content is protected !!