
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಮಕ್ಕಳ ರಜಾ ಶಿಬಿರ – 2025 ಅನ್ನು ಮೇ 7ರಂದು ಬೆಳ್ತಂಗಡಿಯ ಸಾಂತೋಮ್ ಟವರ್‌ನಲ್ಲಿ ಆಯೋಜಿಸಲಾಯಿತು. ಈ ಶಿಬಿರದಲ್ಲಿ ಹೆಚ್‌ಐವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ಮಕ್ಕಳಿಗಾಗಿ , ಮಾಹಿತಿ ಸತ್ರ ಹಾಗೂ ಉಚಿತ ಪುಸ್ತಕ ಮತ್ತು ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಲಲಿತಾ ವಹಿಸಿದ್ದರು. ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯ ಸಹಾಯಕ ಪ್ರಾಧ್ಯಾಪಕರಾದ ಡಾ| ಕುಶಾಲಪ್ಪ ಎಸ್. ಅವರು ಶಿಬಿರವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಮೀಡಿಯಾ ಅಪೋಸ್ಟಲೇಟ್ ನಿರ್ದೇಶಕರಾದ ವಂದನೀಯ ಫಾ. ಮ್ಯಾಥ್ಯೂ ತಾಯೆಕಾಟ್ಟಿಲ್ ಹಾಗೂ ಉಜಿರೆಯ ಎಸ್.ಡಿ.ಎಂ ಕಾಲೇಜಿನ ಎಂ.ಎಸ್.ಡಬ್ಲ್ಯೂ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ| ಧನೇಶ್ವರಿ ಅವರು ವಿವಿಧ ವಿಷಯಗಳ ಬಗ್ಗೆ ತರಬೇತಿ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಜ್ಞಾನನಿಲಯ ಬೆಳ್ತಂಗಡಿಯ ನಿರ್ದೇಶಕರಾದ ವಂ. ಫಾ. ಜೋಸೆಫ್ ಮಟ್ಟಂ ಅವರು ಮಕ್ಕಳಿಗೆ ಉಚಿತ ಪುಸ್ತಕಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ಅವರು ಪ್ರಾಸ್ತಾವಿಕ ನುಡಿಯನ್ನಾಡಿದರು.

ನವಜೀವನ ಆರೈಕೆ ಹಾಗೂ ಬೆಂಬಲ ಕೇಂದ್ರದ ಸದಸ್ಯರಾದ ಶ್ರೀಮತಿ ಶಾರದಾ ಮತ್ತು ಶ್ರೀಮತಿ ಪುಷ್ಪಾ ಪ್ರಾರ್ಥನೆ ನೆರವೇರಿಸಿದರು. ಡಿ. ಕೆ. ಆರ್. ಡಿ ಎಸ್ ಸಂಸ್ಥೆಯ ಸಿಬ್ಬಂದಿ ಶ್ರೀಮತಿ ಸಿಸಿಲಿಯಾ ತಾವ್ರೊ ಸ್ವಾಗತಿಸಿ, ಶ್ರೀಮತಿ ಜಿನಿ ಪಿ.ಜೆ. ಧನ್ಯವಾದವಿತ್ತರು. ಮಾರ್ಕ್ ಡಿಸೋಜ ಕಾರ್ಯಕ್ರಮವನ್ನು ನಿರೂಪಿಸಿದರು. ಸಿಬ್ಬಂದಿಗಳಾದ ಕುಮಾರಿ ಶ್ರೇಯಾ, ಸುನಿಲ್ ಹಾಗೂ ಜಾನ್ಸನ್ ಸಹಕರಿಸಿದರು.