23.3 C
ಪುತ್ತೂರು, ಬೆಳ್ತಂಗಡಿ
May 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

ಬೆಳ್ತಂಗಡಿ : ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆಗಾಗಿ ಸೈನಿಕರನ್ನು ಅಭಿನಂದಿಸಿ ಕಾರ್ಯಕ್ರಮ ನಡೆಯಿತು.

ಈ ವೇಳೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ದೇಶದ ಐಕ್ಯತೆ , ಸಮಗ್ರತೆ , ಸಾರ್ವಭೌಮತ್ವಗಾಗಿ ಕಾಂಗ್ರೆಸ್ ಪಕ್ಷ ತ್ಯಾಗ , ಬಲಿದಾನ ಮಾಡಿದನ್ನು ಈ ದೇಶದ ಇತಿಹಾಸದಿಂದ ಅಳಿಸಲು ಅಸಾಧ್ಯ. ನಮ್ಮ ದೇಶದ ವಿರುದ್ಧ ಯಾವುದೇ ದೇಶ ಯುದ್ಧ ಸಾರಿದರೂ ನಮ್ಮ ಪಕ್ಷ ದೇಶದ ಪರವಾಗಿ ಸದಾಕಾಲವೂ ನಿಲ್ಲುತ್ತದೆ. ನಮ್ಮ ದೇಶದಲ್ಲಿ ಹಿಂದೂ , ಮುಸ್ಲಿಂ , ಕ್ರೈಸ್ತ , ಜೈನ , ಪಾರ್ಸಿ ಎಂಬುದನ್ನು ಮರೆತು ಒಂದಾಗುವ ಕಾಲ ಇದು. ಆದರೆ ಕೆಲವರು ಧರ್ಮದ ಹೆಸರಿನಲ್ಲಿ ರಾಜಕೀಯ ನಡೆಸುತ್ತಿರುವುದು ಅಸಹ್ಯವಾಗಿದೆ. ಆಪರೇಶನ್ ಸಿಂಧೂರದಲ್ಲಿ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದ್ದು ಓರ್ವ ಮುಸ್ಲಿಂ ಮಹಿಳಾ ಸೇನಾಧಿಕಾರಿ ಎಂಬುದನ್ನು ನಾವು ಶ್ಲಾಘಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ ಕುಮಾರ್ , ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ , ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ , ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ವಂದನಾ ಭಂಡಾರಿ , ಗ್ರಾಮೀಣ ಬ್ಲಾಕ್ ಅಧ್ಯಕ್ಷೆ ನಮಿತಾ ಪೂಜಾರಿ , ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ ,ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ , ಉಪಾಧ್ಯಕ್ಷರುಗಳಾದ ಅರುಣ್ ಲೋಬೊ, ನವೀನ್ ಗೌಡ, ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರು ಅಝರ್ ನಾವೂರು , ಮಚ್ಚಿನ ಪಂಚಾಯತ್ ಸದಸ್ಯರು ಪ್ರಮೋದ್ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya
error: Content is protected !!