27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಮಕ್ಕಳ ರಜಾ ಶಿಬಿರ – 2025 ಅನ್ನು ಮೇ 7ರಂದು ಬೆಳ್ತಂಗಡಿಯ ಸಾಂತೋಮ್ ಟವರ್‌ನಲ್ಲಿ ಆಯೋಜಿಸಲಾಯಿತು. ಈ ಶಿಬಿರದಲ್ಲಿ ಹೆಚ್‌ಐವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ಮಕ್ಕಳಿಗಾಗಿ , ಮಾಹಿತಿ ಸತ್ರ ಹಾಗೂ ಉಚಿತ ಪುಸ್ತಕ ಮತ್ತು ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಲಲಿತಾ ವಹಿಸಿದ್ದರು. ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯ ಸಹಾಯಕ ಪ್ರಾಧ್ಯಾಪಕರಾದ ಡಾ| ಕುಶಾಲಪ್ಪ ಎಸ್. ಅವರು ಶಿಬಿರವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು.


ಬೆಳ್ತಂಗಡಿ ಧರ್ಮಪ್ರಾಂತ್ಯದ ಮೀಡಿಯಾ ಅಪೋಸ್ಟಲೇಟ್ ನಿರ್ದೇಶಕರಾದ ವಂದನೀಯ ಫಾ. ಮ್ಯಾಥ್ಯೂ ತಾಯೆಕಾಟ್ಟಿಲ್ ಹಾಗೂ ಉಜಿರೆಯ ಎಸ್.ಡಿ.ಎಂ ಕಾಲೇಜಿನ ಎಂ.ಎಸ್.ಡಬ್ಲ್ಯೂ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ| ಧನೇಶ್ವರಿ ಅವರು ವಿವಿಧ ವಿಷಯಗಳ ಬಗ್ಗೆ ತರಬೇತಿ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಜ್ಞಾನನಿಲಯ ಬೆಳ್ತಂಗಡಿಯ ನಿರ್ದೇಶಕರಾದ ವಂ. ಫಾ. ಜೋಸೆಫ್ ಮಟ್ಟಂ ಅವರು ಮಕ್ಕಳಿಗೆ ಉಚಿತ ಪುಸ್ತಕಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ಅವರು ಪ್ರಾಸ್ತಾವಿಕ ನುಡಿಯನ್ನಾಡಿದರು.

ನವಜೀವನ ಆರೈಕೆ ಹಾಗೂ ಬೆಂಬಲ ಕೇಂದ್ರದ ಸದಸ್ಯರಾದ ಶ್ರೀಮತಿ ಶಾರದಾ ಮತ್ತು ಶ್ರೀಮತಿ ಪುಷ್ಪಾ ಪ್ರಾರ್ಥನೆ ನೆರವೇರಿಸಿದರು. ಡಿ. ಕೆ. ಆರ್. ಡಿ ಎಸ್ ಸಂಸ್ಥೆಯ ಸಿಬ್ಬಂದಿ ಶ್ರೀಮತಿ ಸಿಸಿಲಿಯಾ ತಾವ್ರೊ ಸ್ವಾಗತಿಸಿ, ಶ್ರೀಮತಿ ಜಿನಿ ಪಿ.ಜೆ. ಧನ್ಯವಾದವಿತ್ತರು. ಮಾರ್ಕ್ ಡಿಸೋಜ ಕಾರ್ಯಕ್ರಮವನ್ನು ನಿರೂಪಿಸಿದರು. ಸಿಬ್ಬಂದಿಗಳಾದ ಕುಮಾರಿ ಶ್ರೇಯಾ, ಸುನಿಲ್ ಹಾಗೂ ಜಾನ್ಸನ್ ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya

ಕೊಕ್ಕಡ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರ ಹುಟ್ಟುಹಬ್ಬದ ಆಚರಣೆ: ಧನಸಹಾಯ ವಿತರಣೆ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ಅರಸಿನಮಕ್ಕಿ: ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ ನಿಧನ

Suddi Udaya
error: Content is protected !!