ಮುಂಡೂರು: ಕಾಶ್ಮೀರದ ಪೆಹಲ್ಗಾಮ್ಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತವು ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂದೂರ ಹೆಸರಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ ಹಿನ್ನೆಲೆಯಲ್ಲಿ ಭಾರತದ ಹೆಮ್ಮೆಯ ಸೇನಾ ಸೈನಿಕರ ಶ್ರೇಯಸ್ಸಿಗಾಗಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹ ಕರುಣಿಸಲಿ ಎಂಬುದಾಗಿ ಅರ್ಚಕರಾದ ಅಭಿಲಾಶ್ ಭಟ್ ಇವರು ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಭಜನಾ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಭಗವದ್ಭಕ್ತರು ಉಪಸ್ಥಿತರಿದ್ದರು.